ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ವಸತಿಯುತ ಒಂದು ತಿಂಗಳು ಉಚಿತ ತರಬೇತಿ | ನೇರ ಸಂದರ್ಶನಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಿ

Published on:

ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ(MoRD) ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂವರ್ಧನ ಸಂಸ್ಥೆ (ಸಂಜೀವಿನಿ-KSRLPS) ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿಆರ್ ಎಸ್ಇಟಿಐ)ಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.22 ರಿಂದ ತರಬೇತಿ ಪ್ರಾರಂಭವಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಯ 18 ರಿಂದ 45 ವರ್ಷ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಸ್ಥಳಿಯ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ಹಾಗೂ ವಸತಿ ಸೌಕರ್ಯಗಳು ನೀಡಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ತರಬೇತಿ ನಂತರ ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಕೆ ಹೀಗೆ….

ಆಸಕ್ತಿಯುಳ್ಳ ನಿರುದ್ಯೋಗಿ ಮಹಿಳೆಯರು ತಮ್ಮ ವಿದ್ಯಾರ್ಹತೆಯ ದಾಖಲೆಗಳು ಮತ್ತು ವಿಳಾಸ ದಾಖಲಾತಿಗಳೊಂದಿಗೆ ಸೆ.22 (ಸೋಮವಾರ)ರಂದು ಬೆಳಗ್ಗೆ 9ಕ್ಕೆ ಈ ಕೆಳಗಿನ ವಿಳಾಸದಲ್ಲಿ ನಡೆಯಲಿರುವ ನೇರ ಸಂದರ್ಶನ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು.

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಣಬೆ ಬೇಸಾಯ; ಉಚಿತ ತರಬೇತಿಗೆ ಅರ್ಜಿ ಆಹ್ವಾನ

Important Direct Links:

Official WebsiteCBRSETI
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

3 thoughts on “ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ”

Leave a Comment