ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೂರನೆಯ ವಾರದಿಂದ 31 ದಿನ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ತಿಳಿಸಿದ್ದಾರೆ.
ರಾಜ್ಯದ ಯಾವುದೇ ಜಿಲ್ಲೆಯ 18-45 ವಯೋಮಾನದ ಕನ್ನಡ ಓದಲು-ಬರೆಯಲು ತಿಳಿದಿರುವ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತದೆ. ಬಿಪಿಎಲ್ ಕಾರ್ಡುದಾರರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

Add as a Preferred Source on Google

