ಕಾನೂನು ಪದವೀಧರರಿಗೆ ಉಚಿತ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೀಗೆ

ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯಿಂದ ನ್ಯಾಯಾಂಗ ಆಡಳಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

By Shwetha Chidambar

Published On:

IST

ಫಾಲೋ ಮಾಡಿ

Free training for law graduates
ಕಾನೂನು ಪದವೀಧರರಿಗೆ ಉಚಿತ ತರಬೇತಿ 2025

2025-26ನೇ ಸಾಲಿಗೆ ಮೈಸೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಗಳ (ವರ್ಗ-1, 2ಎ, 3ಎ ಮತ್ತು 3ಬಿ) ಗೆ ಸೇರಿದ ಕಾನೂನು ಪದವೀಧರ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆ ಹಾಗೂ ಇತರೆ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 02-07-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-07-2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ:

  • ಅಭ್ಯರ್ಥಿಗಳು ಹಿಂದುಳಿದ ವರ್ಗಗಗಳಾದ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ:
  • ಅಭ್ಯರ್ಥಿಯು ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ (31-07-2025) ಹಿಂದೆ ಎರಡು ವರ್ಷಗಳೊಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು.
  • ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಣಿ ಮಾಡಿಸಿರಬೇಕು.

ವಯೋಮಿತಿ:

  • ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ ಶುಲ್ಕ:

• ಉಲ್ಲೇಖಿಸಲಗಿರುವುದಿಲ್ಲ

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದ ಕಛೇರಿಗಳ ಸಂಕೀರ್ಣ ಕಟ್ಟಡ, ಕೊಠಡಿ ಸಂಖ್ಯೆ:202, 2ನೇ ಮಹಡಿ, ಸಿದ್ದಾರ್ಥನಗರ, ಮೈಸೂರು ಈ ವಿಳಾಸದಲ್ಲಿ ಅರ್ಜಿ ನಮುನೆ ಪಡೆದು.

  • ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ.
  • ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಜುಲೈ 31 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳಿಗೆ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂಖ್ಯೆ – 0821-2342917ಗೆ ಸಂಪರ್ಕಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment