ನಿರುದ್ಯೋಗಿ ಪುರುಷರಿಗಾಗಿ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನ.20 ರಿಂದ 30 ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, ಆಸಕ್ತಿಯುಳ್ಳ 18 ರಿಂದ 45 ವರ್ಷ ವಯೋಮಾನದ ರಾಜ್ಯದ ಎಲ್ಲಾ ಜಿಲ್ಲೆಯವರು ಪಾಲ್ಗೊಳ್ಳಬಹುದಾಗಿದೆ. ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.



