ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ

Published on:

ನಿರುದ್ಯೋಗಿ ಪುರುಷರಿಗಾಗಿ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನ.20 ರಿಂದ 30 ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, ಆಸಕ್ತಿಯುಳ್ಳ 18 ರಿಂದ 45 ವರ್ಷ ವಯೋಮಾನದ ರಾಜ್ಯದ ಎಲ್ಲಾ ಜಿಲ್ಲೆಯವರು ಪಾಲ್ಗೊಳ್ಳಬಹುದಾಗಿದೆ. ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತಿಯುಳ್ಳ ಅಭ್ಯರ್ಥಿಗಳು ನ.20 ರಂದು (ಗುರುವಾರ) ಬೆಳಗ್ಗೆ 10.00 ಗಂಟೆಗೆ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿ ಜತೆಗೆ ಹಾಜರಾಗಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ- 8970476050, 9591514154, 9686248369, 9505894247ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Important Direct Links:

Official WebsiteCBRSETI
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment