SC Free UPSC Mains Coaching 2024: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2022-23 ರ ಆರ್ಥಿಕ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ UPSC ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ತರಬೇತಿ ಪಡೆದು ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ನೀಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೈಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್‌ಸೈಟ್ https://swdservices.karnataka.gov.inನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.