ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಭರ್ತಿ

Published on:

Updated On:

ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ನಾನಾ ತಾಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಗದಗ, ಶಿರಹಟ್ಟಿ, ರೋಣ, ನರಗುಂದ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಒಟ್ಟು 168 (37 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿ) ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಜು.30 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 30, 2026

ಖಾಲಿ ಇರುವ ಹುದ್ದೆಗಳ ವಿವರ:

✓ ಗದಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ – 07 ಅಂಗನವಾಡಿ ಕಾರ್ಯಕರ್ತೆ ಹಾಗೂ 41 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 48 ಹುದ್ದೆಗಳು ಖಾಲಿ ಇರುತ್ತದೆ.

✓ ಶಿರಹಟ್ಟಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ – 08 ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 29 ಹುದ್ದೆಗಳು ಖಾಲಿ ಇರುತ್ತದೆ.

✓ ರೋಣ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ – 09 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 36 ಹುದ್ದೆಗಳು ಖಾಲಿ ಇರುತ್ತದೆ.

✓ ನರಗುಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ – 05 ಅಂಗನವಾಡಿ ಕಾರ್ಯಕರ್ತೆ ಹಾಗೂ 20 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 25 ಹುದ್ದೆಗಳು ಖಾಲಿ ಇರುತ್ತದೆ.

✓ ಮುಂಡರಗಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ – 08 ಅಂಗನವಾಡಿ ಕಾರ್ಯಕರ್ತೆ ಹಾಗೂ 22 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 30 ಹುದ್ದೆಗಳು ಖಾಲಿ ಇರುತ್ತದೆ.

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ – ಪಿ.ಯು.ಸಿ ತೇರ್ಗಡೆ ಹೊಂದಿರಬೇಕು.

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ 19 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 35 ವರ್ಷಗಳು

ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿಯೊಂದಿಗೆ ಲಗತಿಸಬೇಕಾದ ದಾಖಲಾತಿಗಳು:

• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ 03 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
• ಅಂಗವಿಕಲತೆ ಪ್ರಮಾಣಪತ್ರ (ಅನ್ವಯಿಸಿದಲ್ಲಿ)
• ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ
• ಇತ್ಯಾದಿ ಅಗತ್ಯ ದಾಖಲಾತಿಗಳು

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ಆಯಾ ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಕೇಳಿ ಪಡೆದು.

ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರಗಳನ್ನು ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಜುಲೈ 30ರೊಳಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಗದಗ ತಾಲೂಕು – ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲಕರ ಬಾಲ ಮಂದಿರ ಪಾಲಾ ಬದಾಮಿ ರೋಡ ಹಾಕಿ ಗೌಂಡ್ ಹತ್ತಿರ ಬೆಟಗೇರಿ-ಗದಗ ದೂ.ಸಂ – 08372-238823

ಶಿರಹಟ್ಟಿ ತಾಲೂಕು – ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ತಾಲ್ಲೂಕ ಪಂಚಾಯತ ಕಟ್ಟಡ, ಪೊಲೀಸ್ ಸ್ಟೇಶನ್ ಹತ್ತಿರ ಶಿರಹಟ್ಟಿ -582120

ರೋಣ ತಾಲೂಕು – ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ಎ.ಎಮ್ ಸಾಣಿ ಕಟ್ಟಡ ಗದಗ ರಸ್ತೆ ರೋಣ.

ನರಗುಂದ ತಾಲೂಕು – ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ತಾಲೂಕು ಆಡಳಿತ ಭವನ, ರೂಮ್ ನಂಬರ-17, ಹುಬ್ಬಳ್ಳಿ-ಸೋಲ್ಲಾಪೂರ ರೋಡ ನರಗುಂದ ದೂ.ಸಂ – 08377-244293

ಮುಂಡರಗಿ ತಾಲೂಕು – ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಛೇರಿ, ತಾಲೂಕ ಬಾಲ ಭವನ ಕಟ್ಟಡ, ವಲಯ ಅರಣ್ಯಾಧಿಕಾರಿಗಳ ಕಛೇರಿ ಪಕ್ಕದಲ್ಲಿ, ಹಳೆ ಕಲಕೇರಿ ರಸ್ತೆ ಮುಂಡರಗಿ. ದೂ.ಸಂ – 08371-200050

Important Direct Links:

Official Notification PDF (Gadag Taluk)Download
Official Notification PDF (Mundaragi Taluk)Download
Official Notification PDF (Naragund Taluk)Download
Official Notification PDF (Ron Taluk)Download
Official Notification PDF (Shirahatti Taluk)Download
Official Websitedwcd.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment