ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಜವಾನ ಹುದ್ದೆಗಳ ನೇಮಕಾತಿ

ಎಸ್ಸೆಸ್ಸೆಲ್ಸಿ ಅರ್ಹತೆ

Published on:

ಗದಗ: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 22 ಜವಾನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯವು ಅಧಿಸೂಚನೆ ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಎಸ್ಸೆಸ್ಸೆಲ್ಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿ ತಯಾರಿಸಿ, ಅರ್ಹರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆ ನಡೆಯಲಿದೆ ಎಂದು ನೇಮಕಾತಿಯ ಅಧಿಕೃತ ಅಧಿಸೂಚನೆ ತಿಳಿಸಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ಸೆಪ್ಟೆಂಬರ್ 28
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 31 (ರಾತ್ರಿ 11:59 ರವರೆಗೆ)
  • ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ನವೆಂಬರ್ 03

ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

ಎಸ್.ಎಸ್.ಎಲ್.ಸಿ(10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. (ಸಿಬಿಎಸ್ಇ, ಐಸಿಎಸ್ಇ, ಎನ್ಐಒಎಸ್, ಕೆಒಎಸ್ ಮತ್ತು ಇತರ ರಾಜ್ಯ ಮಂಡಳಿಗಳ 10ನೇ ತರಗತಿ ಪರೀಕ್ಷೆಗಳನ್ನು ತತ್ಸಮಾನ ಎಂದು ಪರಿಗಣಿಸಲಾಗುತ್ತದೆ).

ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

ಸರ್ಕಾರದ ಆದೇಶದನ್ವಯ, ಒಂದು ಬಾರಿಯ ಕ್ರಮವಾಗಿ(One-time measure) ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದ್ದು, ಪರಿಷ್ಕೃತ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 + 5 = 40 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 + 5 = 43 ವರ್ಷಗಳು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 + 5 = 45 ವರ್ಷಗಳು

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆ ನಡೆಯಲಿದೆ. (10ನೇ ತರಗತಿಯ ಅಂಕಗಳನ್ನು ಕೇವಲ ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುತ್ತದೆ).

ಸಂಬಳ (ವೇತನ ಶ್ರೇಣಿ):

ಆಯ್ಕೆಯಾಗುವ ಜವಾನ ಹುದ್ದೆಯ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ:

ರೂ.27,000-650-29,600-725-32,500-800-35,700-900-39,300-1000-43,300-1125-46,675 ಮತ್ತು ಇತರ ಭತ್ಯೆಗಳು ಇರುತ್ತವೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ರೂ.100/-
  • ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ಇರುತ್ತದೆ (ಯಾವುದೇ ಶುಲ್ಕ ಇರುವುದಿಲ್ಲ).

ಶುಲ್ಕ ಪಾವತಿಸುವ ವಿಧಾನ: ನ್ಯಾಯಾಲಯದ ಅಧಿಕೃತ ಜಾಲತಾಣದಲ್ಲಿ ನೀಡಲಾದ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಕಲೆಕ್ಟ್ (State Bank Collect) ಮುಖಾಂತರ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಅಥವಾ UPI ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಬೇಕು. ಡಿಮ್ಯಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್ ಅಥವಾ ಮನಿ ಆರ್ಡರ್‌ಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ ಹೇಗೆ.?

ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣದ (https://gadag.dcourts.gov.in/kn/online-recruitment/) “ಪ್ರಕಟಣೆಗಳು(Notices)” ವಿಭಾಗದಡಿ, “ನೇಮಕಾತಿ(Recruitments)” ಎಂಬ ಉಪವಿಭಾಗದಡಿ ನೀಡಲಾದ “Recruitment for the Post of PEON” ಶೀರ್ಷಿಕೆಯಡಿ ನೀಡಲಾದ “TO APPLY ONLINE APPLICATION” ಶೀರ್ಷಿಕೆಯ ಮುಂದೆ “Click here to Apply” ಲಿಂಕ್‌ ಮೇಲೆ ಕ್ಲಿಕ್ಕಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್‌ ಲಿಂಕ್ಡೌನ್ಲೋಡ್‌ ಮಾಡಿ
ಆನ್‌ಲೈನ್‌ ಅರ್ಜಿ ನಮೂನೆ ಲಿಂಕ್‌ಅರ್ಜಿ ಸಲ್ಲಿಸಿ
ಅಧಿಕೃತ ಜಾಲತಾಣgadag.dcourts.gov.in
ಮತ್ತಷ್ಟು ಸುದ್ದಿಗಳಿಗಾಗಿಕರ್ನಾಟಕಹೆಲ್ಪ್‌.ಇನ್

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

Leave a Comment