ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ(Ganga Kalyana Yojane 2025)ಯಡಿಯಲ್ಲಿ ಹೊಲದಲ್ಲಿ ಉಚಿತ ಬೋರ್ವೆಲ್ ಕೊರೆಸಲು ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ನಿಗಮದ ಜನಾಂಗಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ನೇರವಾಗಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ sevasindhuservices.karnataka.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – 02-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-06-2025
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆಯಿಂದ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 98,000 ರೂಗಳು ಮತ್ತು ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಮಿತಿಯೊಳಗಿರಬೇಕು.
ಸಾಲ ಸೌಲಭ್ಯದ ಮೊತ್ತ:
ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ 4.25 ಲಕ್ಷ ರೂ. (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ) ಹಾಗೂ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು.
ಇನ್ನುಳಿದ ಜಿಲ್ಲೆಗಳಿಗೆ ರೂ.3.25 ಲಕ್ಷಗಳು ಹಾಗೂ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು.
ವಿಶೇಷ ಸೂಚನೆ:
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ
How to Apply for Ganga Kalyana Yojane 2025
ಅರ್ಜಿ ಸಲ್ಲಿಸುವ ವಿಧಾನ:
ಆಯಾ ನಿಗಮಗಳಿಗೆ ಸೇರಿದ ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
ಇ-ಮೇಲ್ ಐಡಿ, ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ.
ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಅರ್ಜಿ ಹುಡುಕಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Dear sir/madam
Kindly pls swimming mechion free give me pls