ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಸಂಸ್ಥೆಯು 2026ರ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್(GATE) ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಜ.13ರಂದು ಬಿಡುಗಡೆ ಮಾಡಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 07, 08, 14 ಮತ್ತು 15 ರಂದು ನಡೆಯಲಿವೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು IITG ಅಧಿಕೃತ ಜಾಲತಾಣ https://gate2026.iitg.ac.in/index.htmlಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
• ಮೊದಲಿಗೆ ವಿದ್ಯಾರ್ಥಿಗಳು IITG ಅಧಿಕೃತ ಜಾಲತಾಣ https://gate2026.iitg.ac.in/index.html ಕ್ಕೆ ಭೇಟಿ ನೀಡಿ.
• ನಂತರ ಅಧಿಸೂಚನೆಗಳು ವಿಭಾಗದಲ್ಲಿ ನೀಡಲಾಗಿರುವ “ಗೇಟ್ 2026 ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ಈಗ GOAPS ಪೋರ್ಟಲ್ನಿಂದ ಡೌನ್ಲೋಡ್ (https://goaps.iitg.ac.in/login)” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಮಾಡಿ.
• ಗೇಟ್ 2026ರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
• ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಒದಗಿಸಲಾಗಿರುವ ಅಭ್ಯರ್ಥಿಯ ಹೆಸರು, ಭಾವಚಿತ್ರ, ಪರೀಕ್ಷಾ ಕೇಂದ್ರ, ಪರೀಕ್ಷಾ ದಿನಾಂಕ, ಸಮಯ ಹಾಗೂ ಇತ್ಯಾದಿ ಮಾರ್ಗಸೂಚಿಗಳನ್ನು ಪರಿಶೀಲಿಸಿಕೊಳ್ಳಿ.