ಜೆಸ್ಕಾಂನಲ್ಲಿ ಶಿಶಿಕ್ಷು ತರಬೇತಿಗೆ; ಅರ್ಜಿ ಆಹ್ವಾನ

Published on:

ಕಲಬುರಗಿ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ)ವು ರಾಷ್ಟೀಯ ಶಿಶಿಕ್ಷು ಯೋಜನೆಯಡಿ 2026-27ನೇ ಸಾಲಿಗೆ ಇಂಜಿನಿಯರಿಂಗ್ ಪದವವೀಧರ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಶಿಶಿಕ್ಷು(ಅಪ್ರೆಂಟಿಸ್‌) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ 175 ಸ್ಥಾನಗಳು, ಡಿಪ್ಲೊಮಾ ಅಪ್ರೆಂಟಿಸ್‌ 100 ಸ್ಥಾನಗಳು ಸೇರಿದಂತೆ ಒಟ್ಟು 275 ಅಭ್ಯರ್ಥಿಗಳನ್ನು ಒಂದು ವರ್ಷಗಳ ಅವಧಿಯವರೆಗೆ ಶಿಶಿಕ್ಷು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲಿದೆ. ಆಫ್‌ಲೈನ್‌ ಮುಖೇನ ಅರ್ಜಿ ಸಲ್ಲಿಸಲು ಜೂ.05ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅಧಿಕೃತ ಜಾಲತಾಣ https://gescom.karnataka.gov.in/173/apprentice-recruitment/knಕ್ಕೆ ಭೇಟಿ ನೀಡಿ, ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 18, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 05, 2026

ಶೈಕ್ಷಣಿಕ ಅರ್ಹತೆ:

✓ ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಶಾಖೆಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

✓ ಡಿಪ್ಲೊಮಾ ಅಪ್ರೆಂಟಿಸ್‌ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಕಾಲೇಜು ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಶಾಖೆಗಳಲ್ಲಿ 03 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು

ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಮಾನದಂಡಗಳ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಆಯ್ಕೆ ಪ್ರಕ್ರಿಯೆ:

  • ಅರ್ಹತಾ ಪರೀಕ್ಷೆ
  • ಅರ್ಹ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
  • ದಾಖಲಾತಿ ಪರಿಶೀಲನೆ
  • ಅಂತಿಮ ಆಯ್ಕೆ

ಶಿಶಿಕ್ಷು ವೇತನ:

ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ ಹುದ್ದೆಗಳಿಗೆ ₹9,000
ಡಿಪ್ಲೊಮಾ ಅಪ್ರೆಂಟಿಸ್‌ ಹುದ್ದೆಗಳಿಗೆ ₹8,000

ಅರ್ಜಿಯೊಂದಿಗೆ ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು:

• ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕಪಟ್ಟಿ ಜೆರಾಕ್ಸ್ ಪ್ರತಿ (ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು)
• ಪದವಿ/ಡಿಪ್ಲೋಮಾ ಎಲ್ಲಾ ಸೇಮಿಸ್ಟರ್ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ (ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು)
• ಡಿಗ್ರಿ/ಡಿಪ್ಲೋಮಾ ಸರ್ಟಿಫಿಕೇಟ್/ಪ್ರಾವಿಸನಲ್ ಡಿಗ್ರಿ ಸರ್ಟಿಫಿಕೇಟ್ ಜೆರಾಕ್ಸ್ ಪ್ರತಿ
• ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ
• ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಯೋಗ್ಯತಾ ಪ್ರಮಾಣ ಪತ್ರದ ಜೆರಾಕ್ಸ್
• ಇಬ್ಬರು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಇತ್ತೀಚಿನ ನಡೆತೆ ಪ್ರಮಾಣ ಪತ್ರದ ಜೆರಾಕ್ಸ್
• ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 03 ಭಾವಚಿತ್ರ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಫ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು ಜೆಸ್ಕಾಂ ಅಧಿಕೃತ ಜಾಲತಾಣ https://gescom.karnataka.gov.in/173/apprentice-recruitment/kn ಕ್ಕೆ ಭೇಟಿ ನೀಡಿ.

• ನಂತರ *ಅಪ್ರೆಂಟಿಸ್ ನೇಮಕಾತಿ* ಶೀರ್ಷಿಕೆಯ ಕೆಳಗೆ ನೀಡಲಾಗಿರುವ “BE and Diploma Apprenticeship Noification” ಆಯ್ಕೆ ಮೇಲೆ ಕ್ಲಿಕ್ ಮಾಡಿ.

• ಉದ್ಯೋಗ ಅದಿಸೂಚನೆ ಹಾಗೂ ಅರ್ಜಿ ನಮೂನೆಯ ಪಿಡಿಎಫ್ ತೆರೆಯುತ್ತದೆ.

• ಮುಂದುವರೆದಂತೆ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು, ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಅಭ್ಯರ್ಥಿಗಳ ಸ್ವ-ವಿಳಾಸವಿರುವ 25ರೂ. ಮೌಲ್ಯದ ಅಂಚೆ ಚೀಟಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಜೂನ್ 05ರೊಳಗೆ ನೇರವಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ಕಳುಹಿಸಬೇಕು.

ವಿಳಾಸ: ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಚೇರಿ, ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ., ಸ್ಟೇಷನ್ ರೋಡ್ ಕಲಬುರಗಿ, 585102

Important Direct Links:

Official Notification and Application Form PDFDownload
Official Websitegescom.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment