ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ)ದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ನಿಗಮದ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿಗೆ ಎಲೆಕ್ನಿಷಿಯನ್ ವೃತ್ತಿಯಲ್ಲಿ ಒಟ್ಟು 221 ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. (SCVT) ರಾಜ್ಯ ವೃತ್ತಿ ಪ್ರಮಾಣ ಪತ್ರ/ಅಂಕಪಟ್ಟಿ ಪಡೆದವರಿಗೆ 1 ವರ್ಷದ ಅವಧಿಯ ತರಬೇತಿ ನೀಡಲಾಗುತ್ತದೆ. ಎಸ್.ಎಸ್.ಎಲ್.ಸಿ. ನಂತರ ಎರಡು ವರ್ಷ ಅವಧಿಯ ಐ.ಟಿ.ಐ. ತರಬೇತಿ ಪಡೆದು ಮತ್ತು ಕುಶಲಕರ್ಮಿ ತರಬೇತಿ ಯೋಜನೆಯಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ನಿಷಿಯನ್ ವೃತ್ತಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕಚೇರಿ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸೆಪ್ಟೆಂಬರ್ 13ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.
Gescom Apprenticeship 2024
Shortview of GESCOM Apprentice Recruitment 2024
Organization Name – Gulbarga Electricity Supply Company Limited (GESCOM) Post Name – Apprentice Total Vacancy – 221 Application Process: Offline Job Location – Gulbarga
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 13, 2024
ವಿದ್ಯಾರ್ಹತೆ:
ಪ್ರಕಟಣೆಯಲ್ಲಿ ತಿಳಿಸಿರುವಂತೆ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ.(SSLC) ನಂತರ ಎರಡು ವರ್ಷ ಅವಧಿಯ ಐ.ಟಿ.ಐ.(ITI) ತರಬೇತಿ ಹೊಂದಿ. ಕುಶಲಕರ್ಮಿ ತರಬೇತಿ ಯೋಜನೆಯಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ನಿಷಿಯನ್ ವೃತ್ತಿಯಲ್ಲಿ ತೇರ್ಗಡೆಯಾಗಿ, ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ (NCVT) ರಾಜ್ಯ ವೃತ್ತಿ ಪ್ರಮಾಣ ಪತ್ರ (SCVT) ಅಂಕಪಟ್ಟಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿ:
ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 16 ರಿಂದ ಗರಿಷ್ಠ 25 ವರ್ಷಗಳ ಒಳಗೆ ಇರಬೇಕು.
ವೇತನ:
ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ಪಡೆದ ಅಭ್ಯರ್ಥಿಗಳಿಗೆ (NCVT) ಹಾಗೂ ರಾಜ್ಯ ವೃತ್ತಿ ಪ್ರಮಾಣ ಪತ್ರ ಪಡೆದ ಅಭ್ಯರ್ಥಿಗಳಿಗೆ (SCVT) ಒಂದು ವರ್ಷದ ತರಬೇತಿ ಅವಧಿಯಲ್ಲಿ ಮಾಸಿಕವಾಗಿ ₹5,500/- ಸ್ಟೇ ಫಂಡ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳಲ್ಲಿ ಐಟಿಐ ಮತ್ತು ಐಟಿಸಿ (ಎಲೆಕ್ನಿಷಿಯನ್ ವೃತ್ತಿ) ಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿ ರೋಸ್ಟರ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
How to Apply for GESCOM Recruitment 2024
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಪೂರ್ಣ ವಿವರವಿರುವ ಸ್ವಯಂ ಲಿಖಿತ ಅಥವಾ ಬೆರಳಚ್ಚು ಮಾಡಿದ ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ “ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ), ನಿಗಮ ಕಛೇರಿ, ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ, (ಜೆಸ್ಕಾಂ) ಕಲಬುರಗಿ ರವರಿಗೆ ಸಲ್ಲಿಸಬೇಕು. ಅರ್ಜಿ ಕಳುಹಿಸುವ ಲಕೋಟೆಯ ಮೇಲೆ 2024-25ನೇ ಸಾಲಿನ ಶಿಶಿಕ್ಷು ಆಯ್ಕೆಗೆ ಅರ್ಜಿ ಎಂದು ಸ್ಪಷ್ಟವಾಗಿ ಬರೆದಿರಬೇಕು.
ಅರ್ಜಿ ಸಲ್ಲಿಸುವ ಕಛೇರಿಯ ವಿಳಾಸ:
ಪ್ರಧಾನ ವ್ಯವಸ್ಥಾಪಕರು,ನಿಗಮ ಕಛೇರಿ, ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ, (ಜೆಸ್ಕಾಂ) ಕಲಬುರಗಿ
I want this job sir