2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಷ್ಠತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಆರ್ಥಿಕವಾಗಿ ಹಿಂದುಳಿದ ಪ.ಪಂ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣವನ್ನು ಪಡೆಯುವ ಅವಕಾಶ ಕಲ್ಪಿಸುವ ಸಲುವಾಗಿ ವಿದ್ಯಾರ್ಥಿ/ ಪೋಷಕರಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ವಿಧಾನವನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – 19-04-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -03-05-2025
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ:
- ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಗಳ ಒಳಗಿರಬೇಕು.
ಆಯ್ಕೆ ವಿಧಾನ:
- ಡಯಟ್ ಮೂಲಕ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದ ಆಧಾರದ ಮೇಲೆ ಆಯ್ಕೆ ವಿದ್ಯಾರ್ಥಿಗಳನ್ನು ಮಾಡಲಾಗುವುದು.
ಅರ್ಜಿ ಶುಲ್ಕ:
- ಅರ್ಜಿ ಶುಲ್ಕ ಉಲ್ಲೇಖಿಸಲಾಗಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಮೈಸೂರು ಜಿಲ್ಲೆಯಲ್ಲಿ, ಅರ್ಜಿಗಳನ್ನು ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು/ ಹುಣಸೂರು/ ಹೆಚ್.ಡಿ ಕೋಟೆ/ ನಂಜನಗೂಡು ಮತ್ತು ಟಿ.ನರಸೀಪುರ ಮತ್ತು ಕೆ.ಆರ್ ನಗರ ತಲ್ಲೂಕು, ರವರಿಂದ ಪಡೆದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬoಧಿಸಿದ ಕಛೇರಿಗಳಿಗೆ ಕಛೇರಿ ವೇಳೆಯಲ್ಲಿ ಸಲ್ಲಿಸಲು ಮೇ 03 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ:
ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು. ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಇತರೆ ಇನ್ನಷ್ಟು ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ