2nd PUC Result 2023 Date and Time: ಎಲ್ಲಾ ಕರ್ನಾಟಕ ಹೆಲ್ಫ್ ಓದುಗರಿಗೆ ನಮ್ಮ ವಂದನೆಗಳು, ಇಂದು ನಾವು ದ್ವಿತೀಯ ಪಿಯುಸಿ ಫಲಿತಾಂಶ 2023 ಬಗ್ಗೆ ಮಾಹಿತಿ ನೀಡಲು ಬಂದಿದ್ದೇವೆ. ಸ್ಪಷ್ಟ ಮಾಹಿತಿಗಾಗಿ ಗಮನವಿಟ್ಟು ಓದಿರಿ .
2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ತಿಂಗಳ ಅಂತ್ಯದಲ್ಲಿ, ಅಂದರೆ ಏಪ್ರಿಲ್ ಕೊನೆಯ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಮೂಲಗಳು ಪ್ರಕಾರ ಮೌಲ್ಯ ಮಾಪನ ಪ್ರಕ್ರಿಯೆಯು ಮುಕ್ತಾಯವಾಗಿದೆ ಹಾಗೂ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಡೇಟಾ ವನ್ನು ಕೂಡಾ ಅಪ್ಲೋಡ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ:09/03/2023 ರಿಂದ 20/03/2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 21/04/2023 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 7.26 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. .
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ ಈ ಕೆಳಗಿನಂತಿದೆ
- ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
- ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ.
- ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
- ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
- ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ಲಿಂಕ್‌ಗಳು :