Breaking News: SSLC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

Follow Us:

2022 -23 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ.

ಈ ಹಿಂದಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕರೋನ ಇದ್ದ ಕಾರಣ ಗ್ರೆಸ್ಸ್ ಮಾರ್ಕ್ಸ್ ಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಎಸ್ ಎಸ್ ಎಲ್ ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಎನ್ನ ಬಹುದಾಗಿದೆ ಏಕೆಂದರೆ . ಈ ಬಾರಿ ಕೂಡಾ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೂ ಕೂಡ ಗ್ರೆಸ್ಸ್ ಮಾರ್ಕ್ಸ್ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಬಾರಿಯೂ ಕೂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೆಸ್ಸ್ ಮಾರ್ಕ್ಸ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಗ್ಗೆ ಎಸ್ ಎಸ್ ಎಲ್ ಸಿ ಬೋರ್ಡ್ ನಿರ್ದೇಶಕ ರಾಮಚಂದ್ರ ಅವರು ಮಾಹಿತಿ ನೀಡಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ಶೇ. 10 ಗ್ರೆಸ್ಸ್ ಮಾರ್ಕ್ಸ್
ಈ ಬಾರಿ ಪರೀಕ್ಷೆ ಬರೆಯುತ್ತಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಕೂಡ ಕರೋನ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.

Great Good News For Sslc Students
Great Good News For Sslc Students

ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ. 6 ವಿಷಯಗಳಲ್ಲಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ , ಉಳಿದ 3 ವಿಷಯಗಳಿಗೆ ಶೇ. 10 ರಷ್ಟು ಅಂದರೆ 26 ಅಂಕಗಳನ್ನು ನೀಡಲಾಗುತ್ತದೆ. ಕನ್ನಡ ಭಾಷೆಯಲ್ಲಿ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಟ 8 ಅಂಕವನ್ನು ಪಡೆಯಬಹುದು.