Karnataka Gruha Jyothi Scheme: ಕರ್ನಾಟಕ ಹೆಲ್ಪ್ ಓದುಗರಿಗೆ ಸ್ವಾಗತ ಇಂದು ನಾವು ಗೃಹ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ಅಂದರೇ Application Form(ಅರ್ಜಿ ನಮೂನೆ), Registration, Apply Online, Eligibility Criteria, Start Date, Last Date ಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ. ಸ್ಪಷ್ಟ ಮಾಹಿತಿಗಾಗಿ ಸರಿಯಾಗಿ ಓದಿಕೊಳ್ಳಿ.
ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿರುವ Gruha Jyothi Yojana Karnataka, ಈ ಯೋಜನೆಯ ಬಗ್ಗೆ ಆದೇಶವನ್ನು ಹೊರಡಿಸಿದ್ದು. ಈ ಯೋಜನೆಯು ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ಆದೇಶ ಹೊರಡಿಸಲಾಗಿದೆ. ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.
Gruha Jyothi Yojana Karnataka
ಗೃಹ ಜ್ಯೋತಿ ಯೋಜನೆಯನ್ನು ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ” ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ. ‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಸಭೆಯು ಅನುಮೋದಿಸಿದೆ.
Eligibility Criteria For Gruha Jyothi Scheme
ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.
- ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
- ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
- ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು .
- ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
- ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
- ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡಿರಬೇಕು.
- ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ | ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
- ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
- ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ(ಮೀಟರ್) ಓದುವುದು ಕಡ್ಡಾಯವಾಗಿರುತ್ತದೆ.
- ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
Important Date:
Gruha Jyothi Scheme Online Registration Start Date: June 18
Last Date For Gruha Jyothi Scheme Online Application Form: Updating Soon
How to Apply Online for Karnataka Gruha Jyothi Scheme
ಆನ್ ಲೈನ್ ಅರ್ಜಿ ಸಲ್ಲಿಸಲು Seva Sindhu ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇರುತ್ತದೆ. ಈ ಕೆಳಗಿನ ಹಂತಗಳನ್ನೂ ಅನುಸರಿಸಿ ಅರ್ಜಿ ಸಲ್ಲಿಸಬಹುದಾಗಿದೆ.
- ಮೊದಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ (https://sevasindhugs.karnataka.gov.in/) ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮ್ಮ ಮೊಬೈಲ್ ನಂಬರ್ ಮುಖಾಂತರ ಲಾಗಿನ್ ಆಗಿರಿ
- ಮೊತ್ತೊಂದು ಪುಟ ನಿಮ್ಮ ಮುಂದೆ ಬರುತ್ತೆ, ಈವಾಗ ನಿಮ್ಮ ಎಡ ಭಾಗದಲ್ಲಿ Menu ಮೇಲೆ ಕ್ಲಿಕ್ ಮಾಡಿ
- ನಂತರ Apply for Service ಮೇಲೆ ಕ್ಲಿಕ್ ಮಾಡಿ
- ನಿಮ್ಮ ಬಲಭಾಗದಲ್ಲಿ ಇರುವ Search ಬಾರ್ ನಲ್ಲಿ “Gruha Jyothi Scheme” ಅಂತ ಸರ್ಚ್ ಮಾಡಿ. ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅಗತ್ಯವಿರುವ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಗೆ Submit ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ
Gruha Jyothi Scheme Seva Sindhu Application Form
ಪ್ರಮುಖ ಲಿಂಕ್‌ಗಳು:
- Gruha Jyothi Scheme Seva Sindhu New Link (Direct Link) – Apply Now
- All Scheme link Official Website: sevasindhugs.karnataka.gov.in
- Gruha Jyothi Registration Online Form Link – 2 : Apply Now
- Official Website: karnataka.gov.in
- More Updates Visit : KarnatakaHelp.in
ಅಂತಿಮ ನುಡಿ : ನಾವು ನೀಡಿದ ಮಾಹಿತಿಯು ನಿಮಗೆ ಉಪಯೋಗವಾಗಿದೆ ಎಂದು ನಾವು ಭಾವಿಸಿದ್ದೇವೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮುಖಾಂತರ ತಿಳಿಸಬಹುದಾಗಿದೆ . ಟೀಮ್ ಕರ್ನಾಟಕ ಹೆಲ್ಪ್ ಧನ್ಯವಾದಗಳು
How to Apply Gruha Jyothi Scheme Karnataka?
Visit sevasindhugs.karnataka.gov.in to Apply for Gruha Jyothi Scheme.
What is the Last Date for Gruha Jyothi Scheme?
Updating soon.