ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme)ಯನ್ನು ಜಾರಿಗೆ ತಂದಿತು. ಈ ಯೋಜನೆಯ ಪ್ರಮುಖ ಉದ್ದೇಶ ರಾಜ್ಯದ್ಯಂತ ಆರ್ಥಿಕವಾಗಿ ದುರ್ಬಲವಾಗಿರುವಂತಹ ಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಪ್ರಸ್ತುತ ಈ ಗೃಹಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ ಸಾಗುತ್ತಾ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದುವರೆಗೂ 18 ಕಂತುಗಳ ಹಣವನ್ನು ಅಂದರೆ 36 ಸಾವಿರ ರೂಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. 19ನೆಯ ಗೃಹಲಕ್ಷ್ಮಿ ಕಂತು ಯಾವಾಗ ಬಿಡುಗಡೆ ಮಾಡಲಿದ್ದಾರೆ ಎಂಬುದರ ಕುರಿತು ಕೆಲ ಅಪ್ಡೇಟ್ ಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಗೃಹಲಕ್ಷ್ಮಿ 19ನೇಯ ಕಂತು ಬಿಡುಗಡೆ?
2023 ರ ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಮೊದಲನೆಯ ಕಂತನ್ನು ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೂ 18 ಕಂತುಗಳನ್ನು ಪೂರ್ಣಗೊಳಿಸಿದ ಸರ್ಕಾರ 2025 ರ ಜನವರಿ ತಿಂಗಳ ಗೃಹಲಕ್ಷ್ಮಿ 18ನೆಯ ಕಂತನ್ನು ಈಗಾಗಲೇ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಿದೆ. ಫೆಬ್ರವರಿ ತಿಂಗಳ 19ನೇಯ ಕಂತನ್ನು ಈ ತಿಂಗಳಲ್ಲಿಯೇ(Gruha Lakshmi 19th Installment Date) ಬಿಡುಗಡೆ ಮಾಡುವ ಸಂಭವವಿದೆ.
ಈ ಯೋಜನೆಗೆ ನೀವು ಇನ್ನೂ ಫಲಾನುಭವಿಯಾಗದಿದ್ದಲ್ಲಿ ಈಗಲೇ ಅರ್ಜಿ ಸಲ್ಲಿಸಿ. ಅರ್ಜಿಯನ್ನು ಆನ್ ಲೈನ್ ಹಾಗೂ ಆಫ್ ಲೈನ್ ಮುಖಾಂತರ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
- ಸೇವಾ ಸಿಂಧು ಖಾತರಿ ಯೋಜನೆಗಳ ಪೋರ್ಟಲ್ ಗೆ ಭೇಟಿ ನೀಡಿ.
- ಪಾಪ್ – ಅಪ್ ಬಾಕ್ಸ್ ನಲ್ಲಿ ಡಿಸ್ಪ್ಲೇ ಮಾಡುವ ಗೃಹಲಕ್ಷ್ಮಿ ಯೋಜನೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಯೋಜನೆಗೆ ಬೇಕಾದ ವೈಯಕ್ತಿಕ ದಾಖಲೆಗಳು ಹಾಗೂ ಮಾಹಿತಿಯನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕಚೇರಿ, ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಾಡ ಕಚೇರಿಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.
ಗೃಹಲಕ್ಷ್ಮಿ ಅರ್ಜಿ ಸ್ಥಿತಿ ಪರಿಶೀಲಿಸುವುದು ಹೇಗೆ?
- ಫಲಾನುಭವಿಯು ಸೇವಾ ಸಿಂಧು ಖಾತರಿ ಯೋಜನೆಗಳ ಪೋರ್ಟಲ್‌ನಿಂದ ಅರ್ಜಿ ನಮೂನೆಯ ಸ್ಥಿತಿಯನ್ನು ಪರಿಶೀಲಿಸಬಹುದು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: Gruha Lakshmi DBT Status Check Online 2025 @ahara.kar.nic.in
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ ಸಂಖ್ಯೆ – 08022279954, ಮೊ.ಸಂ – 8792662814 ಅಥವಾ 8792662816
Important Direct Links:
Official Website | Guarantee Schemes |
More Updates | Karnataka Help.in |