ಪೇರಲ ಹಣ್ಣು (ಸೀಬೆಹಣ್ಣು) ಇದನ್ನ ಬಡವರ ಸೇಬು ಅಂತಲೂ ಕರೆಯುತ್ತಾರೆ. ಪೇರಲ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಇದನ್ನ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪ್ರತಿನಿತ್ಯ ಒಂದು ಸೀಬೆಹಣ್ಣು ಸೇವಿಸಿದರೆ ವೈದ್ಯರಿಂದ ದೂರ ಉಳಿಯಬಹುದು.
ಹಾಗಿದ್ರೆ ಈ ಪೇರಲ ಹಣ್ಣು ಹಾಗೂ ಇದರ ಎಲೆಯಿಂದ ಯಾವೆಲ್ಲ ಆರೋಗ್ಯ ಪ್ರಯೋಜನಗಳು ಇವೆ? ಆರೋಗ್ಯದ ಹಿತ ಕಾಪಾಡುವಲ್ಲಿ ಇದು ಬೀರುವ ಪ್ರಮುಖ ಅಂಶಗಳ ಕುರಿತು ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
✓ ಪೇರಲ ಹಣ್ಣಿನಲ್ಲಿ ವಿಟಮಿನ್ ‘ಸಿ’ ಅಂಶ ಹೇರಳವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
✓ ಪೇರಲ ಹಣ್ಣು ಫೈಬರ್ ನಿಂದ ಸಮೃದ್ಧವಾಗಿದ್ದು, ಇದು ಜೀರ್ಣಕ್ರಿಯೆಯನ್ನು ಉತ್ತಮಪಡಿಸಿ ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.
ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ
✓ ಹೃದಯದ ಆರೋಗ್ಯ ಕಾಪಾಡುವಲ್ಲಿ ಪೇರಲ ಹಣ್ಣು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೇರಲ ಹಣ್ಣಿನಲ್ಲಿ ಪೊಟ್ಯಾಷಿಯಂ ಮತ್ತು ಫೈಬರ್ ಹೆಚ್ಚಾಗಿದ್ದು, ಇದು ಹೃದಯದ ಆರೋಗ್ಯವನ್ನು ಉತ್ತಮಪಡಿಸಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ
✓ ಪೇರಲ ಹಣ್ಣು ವಿಟಮಿನ್ ‘ಸಿ’ ಯಿಂದ ಸಮೃದ್ಧವಾಗಿದೆ, ಇದು ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ ಮತ್ತು ಚರ್ಮದ ಸಮಸ್ಯೆಗಳನ್ನು ನಿವಾರಿಸುತ್ತದೆ.
ಕ್ಯಾನ್ಸರ್ ಅನ್ನು ತಡೆಯುತ್ತದೆ
✓ ಪೇರಲ ಹಣ್ಣು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಇದು ಕ್ಯಾನ್ಸರ್ ಅನ್ನು ತಡೆಯುತ್ತದೆ ಹಾಗೂ ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ.
ಪೇರಲ ಹಣ್ಣಿನ ಎಲೆಯೂ ಉಪಯುಕ್ತ
✓ ಪೇರಲ ಹಣ್ಣು ಮಾತ್ರವಲ್ಲ ಪೇರಲ ಹಣ್ಣಿನ ಎಲೆಯಿಂದಲೂ ಅನೇಕ ಆರೋಗ್ಯ ಪ್ರಯೋಜನಗಳು ಇವೆ. ಆಯುರ್ವೇದದಲ್ಲೂ ಪೇರಲ ಹಣ್ಣಿನ ಎಲೆಯಿಂದ ಅನೇಕ ಔಷದಗಳನ್ನು ತಯಾರು ಮಾಡುತ್ತಾರೆ. ಪೇರಲ ಹಣ್ಣಿನ ಎಲೆ ಸೇವನೆಯಿಂದ ಹಿಮೋಗ್ಲೋಬಿನ್ ಹೆಚ್ಚಾಗುತ್ತದೆ. ಹಲ್ಲುಗಳ ಆರೋಗ್ಯ ಕಾಪಾಡುವಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸುತ್ತದೆ.
ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.