ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೈನಿಂಗ್ ಇಸ್ಟಿಟ್ಯೂಟ್ ವತಿಯಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟಿಷಿಯನ್, ವೆಲ್ಡರ್, COPA, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿ.ಎನ್.ಸಿ. ಪ್ರೋಗ್ರಾಮ್ ಕಂ ಆಪರೇಟರ್, ಎಂ.ಆರ್.ಎ.ಸಿ. ಟ್ರೇಡ್ಗಳಲ್ಲಿ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.26ರೊಳಗೆ ಅರ್ಜಿ ಸಲ್ಲಿಸಿ ಎಂದು ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಸೆಪ್ಟೆಂಬರ್ 08, 2025
ತರಬೇತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 26, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ನಿಗದಿಪಡಿಸಿದಂತೆ ನಿಯಮಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಅಪ್ರೆಂಟಿಸ್ ಶಿಪ್ ಇಂಡಿಯಾ ಅಧಿಕೃತ ಜಾಲತಾಣ http://apprenticeshipindia.org/candidate-registration ಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಿ.
• ನಂತರ ಅರ್ಜಿ ನಮೂನೆಯನ್ನು (ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ ಎನ್.ಆರ್.ಮೊಹಲ್ಲಾ ಮೈಸೂರು) ಇಲ್ಲಿ ಪಡೆದು.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಪ್ರೆಂಟಿಸ್ ನೋಂದಣಿ ಸಂಖ್ಯೆ ನಮೂದಿಸಿ.
ಅರ್ಜಿಯೊಂದಿಗೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಐಟಿಐ ಅಂಕಪಟ್ಟಿಗಳ ಪ್ರತಿ, NTC ನಕಲು(ನ್ಯಾಷನಲ್ ಟ್ರೇಡ್ ಸರ್ಟಿಫಿಕೆಟ್), ಜಾತಿ/ವಿಕಲಚೇತನ/ಮಾಜಿ ಸೈನಿಕ ಅವಲಂಬಿತ ಪ್ರಮಾಣ ಪತ್ರದ ಪ್ರತಿ , ಆಧಾರ್ ಕಾರ್ಡ್, ಮತ್ತು ಪ್ಯಾನ್ ಕಾರ್ಡ್/ಇ-ಪ್ಯಾನ್ ಪ್ರತಿ, Copy of NCVT MIS Portal Registration ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸೆಪ್ಟೆಂಬರ್ 26 ರೊಳಗೆ ಸಲ್ಲಿಸಬೇಕು.
ವಿಳಾಸ: ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ ಎನ್.ಆರ್.ಮೊಹಲ್ಲಾ ಮೈಸೂರು.
ಹೆಚ್ಚಿನ ಮಾಹಿತಿಗಾಗಿ: ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮೈಸೂರು, ಇವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂ.ಸಂ: 0821-2489972 ಅನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.