ದೇಶದಲ್ಲಿ ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಹರ್ ಘರ್ ತಿರಂಗ'(Har Ghar Tiranga Campaign 2024) ಅಭಿಯಾನವನ್ನು ಪ್ರಾರಂಭಿಸಲು ಕರೆ ನೀಡಿದ್ದಾರೆ.
‘ಹರ್ ಘರ್ ತಿರಂಗ’ ಅಭಿಯಾನ 2024: ಈ ಅಭಿಯಾನದ ಭಾಗವಾಗಿ ಭಾರತೀಯರು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಆರಿಸಬೇಕು. ದೇಶದಲ್ಲಿ ಈ ಬಾರಿ 78ನೇ ಸ್ವಾತಂತ್ರ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ವಿಶೇಷವಾಗಿ ಆಗಸ್ಟ್ 9 ರಿಂದ 15 ರವರೆಗೆ ಹರ್ ಘರ್ ತಿರಂಗ ಅಭಿಯಾನವನ್ನು ಪ್ರಾರಂಭಿಸಲು ಪ್ರಧಾನಿ ಕರೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಈ ವರ್ಷದ ಸ್ವತಂತ್ರ ದಿನಾಚರಣೆಯ ಹತ್ತಿರ ಬರುತ್ತಿದ್ದು, ತಿರಂಗವನ್ನು ಸಾಮೂಹಿಕವಾಗಿ ಆಚರಣೆಯನ್ನು ಮಾಡೋಣ. ನಾನು ನನ್ನ ಪ್ರೊಫೈಲ್ ಚಿತ್ರವನ್ನು ಬದಲಿಸಿದ್ದೇನೆ. ನೀವು ಕೂಡ ನಿಮ್ಮ ಸಾಮಾಜಿಕ ಮಾಧ್ಯಮದ ಖಾತೆಗಳಲ್ಲಿನ ಪ್ರೊಫೈಲ್ ಚಿತ್ರಗಳನ್ನು ಬದಲಿಸಿ. ಧ್ವಜದ ಜೊತೆಗೆ ಫೋಟೋ ಕ್ಲಿಕ್ ಮಾಡಿ https://hargartiranga.com ನಲ್ಲಿ ಅಪ್ಲೋಡ್ ಮಾಡಿ ಎಂದು ಮನವಿ ಮಾಡಿದ್ದಾರೆ.
ಈ ಅಭಿಯಾನದಲ್ಲಿ ಪಾಲ್ಗೊಂಡು ಧ್ವಜದ ಜೊತೆ ಫೋಟೋ ತೆಗೆದು ಅಪ್ಲೋಡ್ ಮಾಡಿದ ನಂತರ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು. ಈ ಪ್ರಕ್ರಿಯೆಗೆ ಹರ್ ಘರ್ ತಿರಂಗ ಅಧಿಕೃತ ವೆಬ್ ಸೈಟ್ hargartiranga.com ಮೂಲಕ ನೊಂದಾಯಿಸಿಕೊಳ್ಳಬಹುದಾಗಿದೆ.
ಹಾಗಾದರೆ ಹರ್ ಘರ್ ತಿರಂಗ ಅಭಿಯಾನಕ್ಕೆ ಆನ್ ಲೈನ್ ಮೂಲಕ ಫೋಟೋ ಅಪ್ಲೋಡ್ ಮಾಡಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ.