ಭಾರತದ ಅತಿ ಹೆಚ್ಚು ಚಿನ್ನ ಉತ್ಪಾದಕ ಕಂಪನಿಯಾಗಿರುವ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಆಸ್ಪತ್ರೆಯಲ್ಲಿ ತಜ್ಞರು ಹಾಗೂ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನೇರಸಂದರ್ಶನಕ್ಕೆ ಕರೆ ನೀಡಿದೆ.
ಹಟ್ಟಿಯಲ್ಲಿರುವ 120 ಹಾಸಿಗೆಗಳ ಆಸ್ಪತ್ರೆಯಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಜನರಲ್ ಸರ್ಜನ್-1, ಅನಸ್ಥೆಸಿಸ್ಟ್-1 ಹಾಗೂ ವೈದ್ಯಾಧಿಕಾರಿಗಳು-3 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನರಲ್ ಸರ್ಜನ್ ಹುದ್ದೆಗೆ – ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಜನರಲ್ ಸರ್ಜರಿ ವಿಭಾಗದಲ್ಲಿ ಎಂಎಸ್ ಪದವಿ ಪೂರ್ಣಗೊಳಿಸಿರಬೇಕು ಹಾಗೂ ನಿವೃತ್ತ ವೈದ್ಯರು ಸಹ ಸಂದರ್ಶನಕ್ಕೆ ಹಾಜರಾಗಬಹುದು.
ಅನಸ್ಥೆಶಿಸ್ಟ್ ಹುದ್ದೆಗೆ – ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅನಸ್ಥೆಶಿಯಾದಲ್ಲಿ ಎಂಡಿ ಅಥವಾ ಡಿಎನ್ಬಿ ಅಥವಾ ಡಿಪ್ಲೊಮಾ ಹೊಂದಿರಬೇಕು ಹಾಗೂ ನಿವೃತ್ತ ವೈದ್ಯರು ಸಹ ಸಂದರ್ಶನಕ್ಕೆ ಹಾಜರಾಗಬಹುದು.
ವೈದ್ಯಾಧಿಕಾರಿಗಳು ಹುದ್ದೆಗಳಿಗೆ – ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಉಲ್ಲೇಖಿಸಲಾಗಿರುವುದಿಲ್ಲ
ಸಂಬಳ:
• ಜನರಲ್ ಸರ್ಜನ್ ಹಾಗೂ ಅನಸ್ಥೆಸಿಸ್ಟ್ ಹುದ್ದೆಗಳಿಗೆ – ಮಾಹೆಯಾನ 1,40,000ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.
• ವೈದ್ಯಾಧಿಕಾರಿಗಳು ಹುದ್ದೆಗಳಿಗೆ – ಮಾಹೆಯಾನ 75,000ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.
ನೇರ ಸಂದರ್ಶನ ನಡೆಯುವ ದಿನಾಂಕ ಹಾಗೂ ಸ್ಥಳ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಪೂರ್ಣ ವಿವರಗಳನ್ನೊಳಗೊಂಡ ಅರ್ಜಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ದಾಖಲೆ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲಾತಿಗಳ ಮೂಲ ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಅ.4ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, ಹಟ್ಟಿ – 584115 ಯಲ್ಲಿರುವ ಆಡಳಿತ ಕಚೇರಿಯಲ್ಲಿ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.