ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ (Group-D) ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ನ್ಯಾಯಾಲಯದ ಘಟಕದಲ್ಲಿ ಒಟ್ಟು 26 ಜವಾನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಶೈಕ್ಷಣಿಕ ಸಾಧನೆಯ ಮೂಲಕ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ನಂತರ ಸಂದರ್ಶನ ನಡೆಸಿ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದ ಅಧಿಕೃತ ವೆಬ್ ಸೈಟ್ https://haveri.dcourts.gov.in/notice-category/recruitments ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ನೇಮಕಾತಿ ಕುರಿತಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಎಲ್ಲದರ ಕುರಿತು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Haveri District Court Recruitment 2024
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್,ಎಸ್ ಎಲ್, ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕನ್ನಡ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18ರಿಂದ ಗರಿಷ್ಠ 40 ವರ್ಷಗಳು ಮೀರಿರಬಾರದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ- 1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
ಇತರ ಹಿಂದುಳಿದ ವರ್ಗಗಳ ಪ್ರವರ್ಗ 2A, ಪ್ರವರ್ಗ 2B, ಪ್ರವರ್ಗ 3A, ಪ್ರವರ್ಗ 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸ ಅಭ್ಯರ್ಥಿಗಳು ಸಾಮಾನ್ಯ ವರ್ಗಕ್ಕೆ ಸೇರಿದ್ದರೆ ಗರಿಷ್ಠ 35 ವರ್ಷಗಳು ಮೀರಿರಬಾರದು.
ವೇತನ ಶ್ರೇಣಿ:
17,000- 28,950 ಮಾಸಿಕ ವೇತನ ಜೊತೆಗೆ ಇತರೆ ಭತ್ಯೆಗಳು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಲಾಗುತ್ತದೆ. ನಂತರ ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಸಾಮರ್ಥ್ಯದ ಬಗ್ಗೆ ಪರೀಕ್ಷೆ ನಡೆಸಲಾಗುತ್ತದೆ. ಕೊನೆಯದಾಗಿ ಸಂದರ್ಶನ ಮಾಡಿ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.