ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ(Haveri Gram Panchayat Recruitment 2024) ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2022 ನಿಯಮಗಳ ಅನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರು ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 18 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಗ್ರಾಮ ಪಂಚಾಯಿತಿವಾರು ಖಾಲಿರುವ ಹುದ್ದೆಗಳಿಗೆ ಮತ್ತು ಅವುಗಳ ಮೀಸಲಾತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದನ್ನು ಗಮನಿಸಬೇಕು. ಯಾವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದೆಯೋ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ರಿಂದ ಪಡೆದ ವಾಸ ಸ್ಥಳ ದೃಢೀಕರಣ ಪತ್ರವನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಹಾವೇರಿಯ ಅಧಿಕೃತ ವೆಬ್ ಸೈಟ್ https://haveri.nic.in ಭೇಟಿ ನೀಡುವ ಮೂಲಕ ಅರ್ಜಿಯನ್ನು ಜುಲೈ 31ರ ಒಳಗೆ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Haveri Gram Panchayat Recruitment 2024
Organization Name – Haveri District Gram Panchayats Post Name – Library and Information Center Supervisor Total Vacancy – 18 Application Process: Online Job Location – Haveri
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2024
ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಪಾಸಾಗಿರಬೇಕು.
ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
ವಯಸ್ಸಿನ ಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಥಿಯಲ್ಲಿ ಗಳಿಸಿದ ಗರಿಷ್ಟ ಅಂಕಗಳ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹500
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ₹300
ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ – ₹200
ವಿಶೇಷ ಚೇತನ ಅಭ್ಯರ್ಥಿಗಳಿಗೆ – ₹100
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.