ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 338 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಉದ್ಯೋಗ ತರಬೇತಿ ಜೊತೆಗೆ ಸ್ಟೇ ಫಂಡ್ ನೀಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ತರಬೇತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ್ಯಾಷನಲ್ ಅಪ್ರೆಂಟಿಸ್ ಶಿಪ್ ಸ್ಕೀಮ್ (NATS)ನ ಅಧಿಕೃತ ವೆಬ್ ಸೈಟ್ https://mhrdnats.gov.in ಗೆ ಭೇಟಿ ನೀಡಿ ಆಗಸ್ಟ್ 20ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಪ್ರೆಂಟಿಸ್ ನೇಮಕಾತಿ (HESCOM Apprentice Recruitment 2024)ರ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of HESCOM Apprenticeship 2024
Organization Name – Hubli Electricity Supply Company Limited (HESCOM) Post Name – Apprentice Total Vacancy – 338 Application Process: Online Job Location – Hubli
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 5 , 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 20 , 2024
ಆಯ್ಕೆ ಪಟ್ಟಿ ಬಿಡುಗಡೆಯ ದಿನಾಂಕ – ಆಗಸ್ಟ್ 27, 2024
ದಾಖಲಾತಿ ಪರಿಶೀಲನೆಯ ದಿನಾಂಕ – ಸೆಪ್ಟೆಂಬರ್ 9, 2024
ಹುದ್ದೆಗಳ ವಿವರ:
ಪದವಿ ಮುಗಿಸಿದವರಿಗೆ – 200
ಡಿಪ್ಲೋಮೋ ಮುಗಿಸಿದವರಿಗೆ – 138
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮೋ ಮುಗಿಸಿದವರು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಪ್ರೆಂಟಿಸ್ ಶಿಪ್ ಕಾಯ್ದೆಯ ಅನುಸಾರ ಅರ್ಜಿ ಸಲ್ಲಿಸುವವರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.
ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹9,000 ರಿಂದ ₹8,000 ಸ್ಟೇ ಫಂಡ್ ನೀಡಲಾಗುತ್ತದೆ.