ಹೆಸ್ಕಾಂನಲ್ಲಿ ಶಿಶುಕ್ಷುಗಳ ಆಯ್ಕೆ; ಆರ್ಜಿ ಆಹ್ವಾನ

ಐಟಿಐ ಅರ್ಹತೆ

Published on:

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಲಿಮಿಟೆಡ್‌ ವತಿಯಿಂದ 2026-27ನೇ ಸಾಲಿನ ಅವಧಿಗೆ ಐಟಿಐ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ ಶಿಶುಕ್ಷುಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅವಧಿ 1 ವರ್ಷದ್ದಾಗಿದೆ. ಐಟಿಐ ಪೂರ್ಣಗೊಳಿಸಿರುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಪ್ರೆಂಟಿಸ್‌ಶಿಪ್‌ ಅಧಿಕೃತ ಜಾಲತಾಣ https://www.apprenticeshipindia.gov.in/ ನೋಂದಣಿಯಾಗಿ. ಹೆಸ್ಕಾಂನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಡೌನ್ಲೋಡ್‌ ಮಾಡಿಕೊಂಡು ಭರ್ತಿ ಮಾಡಿ, ʼಕಾರ್ಯನಿರ್ವಾಹಕ ಇಂಜಿನಿಯರರು(ವಿ), ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ – 580024ʼಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಮಾ.09ರೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಫೆಬ್ರವರಿ 11, 2026
  • ಆನ್ಲೈನ್ ಮೂಲಕ ಅಪ್ರೆಂಟಿಸ್ ಪೋರ್ಟಲ್ ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ – ಮಾರ್ಚ್ 02, 2026
  • ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 09, 2026

ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು;

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎರಡು ವರ್ಷದ ಐ.ಟಿ.ಐ ಎಲೆಕ್ಟ್ರಿಷಿಯನ್ ಟ್ರೇಡ್‌ನಲ್ಲಿ ಉತ್ತೀರ್ಣರಾಗಿ NCVT/SCVT ಯಿಂದ ನೀಡಲಾದ ತಾತ್ಕಾಲಿಕ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರವನ್ನು ಹೊಂದಿರಬೇಕು.

• ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.

• ಈಗಾಗಲೇ ಶಿಶುಕ್ಷು ತರಬೇತಿಯನ್ನು ಪೂರ್ಣಗೊಳಿಸಿದ ಅಥವಾ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ವಯೋಮಿತಿ:

09-03-2026 ರಂತೆ:

ಕನಿಷ್ಠ ಮಿತಿ – 25 ವರ್ಷಗಳು
ಗರಿಷ್ಠ ಮಿತಿ – 30 ವರ್ಷಗಳು

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
  • ದಾಖಲೆ ಪರಿಶೀಲನೆ

ಸ್ಟೈಫಂಡ್:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹9,600ವರೆಗೆ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ:

• ಅಭ್ಯರ್ಥಿಗಳು ಅಪ್ರೆಂಟಿಸ್‌ ಅಧಿಕೃತ ಜಾಲತಾಣ https://www.apprenticeshipindia.gov.in/ಕ್ಕೆ ಭೇಟಿ ನೀಡಿ.

• ನೋಂದಾಯಿತ ಇಮೇಲ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• “ಜಾಹೀರಾತು ಮಾಡಿದ ಖಾಲಿ ಹುದ್ದೆಗಳ ವಿರುದ್ಧ ಅರ್ಜಿ ಸಲ್ಲಿಸಿ” ಅಡಿಯಲ್ಲಿ “ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ” ಅನ್ನು ಹುಡುಕಿ. – “ಹೆಸ್ಕಾಂ ಅಪ್ರೆಂಟಿಸ್ ತರಬೇತಿ 2026” ಕೆಳಗೆ ನೀಡಲಾಗಿರುವ “ಅನ್ವಯಿಸು” ಆಯ್ಕೆ ಮಾಡಿ ನೋಂದಾಯಿಸಿ.

• ಇದಾದ ಬಳಿಕ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

• ಹೆಸ್ಕಾಂನ ಅರ್ಜಿ ನಮೂನೆ ಡೌನ್ಲೋಡ್ ಮಾಡುವ ಲಿಂಕ್ – https://karnatakahelp.in/wp-content/uploads/2026/02/HESCOM-Apprentice-Recruitment-2026-Application-Form.pdf

• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ, ಅಗತ್ಯ ದಾಖಲಾತಿಗಳು ಹಾಗೂ ಸಾಮಾನ್ಯ ಅಭ್ಯರ್ಥಿಗಳು 100ರೂ. ಮತ್ತು ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳು 50ರೂ. ಮೊತ್ತದ ಇಂಡಿಯನ್ ಪೊಸ್ಟಲ್ ಆರ್ಡರನ್ನು “ಆರ್ಥಿಕ ಸಲಹೆಗಾರರು, ಹುವಿಸಕಂನಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಲಗತ್ತಿಸಿ.

• ಲಕೋಟೆಯ ಮೇಲೆ “ಎಲೆಕ್ಟ್ರಿಷಿಯನ್ ವೃತ್ತಿಯ ಶಿಶುಕ್ಷು ತರಬೇತಿಗಾಗಿ ಅರ್ಜಿ” ಎಂದು ನಮೂದಿಸಿ ಮಾರ್ಚ್ 09ರೊಳಗೆ ಈ ಕೆಳಗಿನ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ಕಳುಹಿಸಬೇಕು.

ವಿಳಾಸ: ಕಾರ್ಯನಿರ್ವಾಹಕ ಇಂಜಿನಿಯರರು(ವಿ), ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ – 580024

Important Direct Links:

Official Notification PDFDownload
Application Form PDFDownload
Online Application Form Linkwww.apprenticeshipindia.gov.in
Official Websitehescom.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment