ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ತಜ್ಞ ವೈದ್ಯರು, ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕಿಯರು ಸೇರಿದಂತೆ ಇತರೆ ಒಟ್ಟು 30ಕ್ಕೂ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಇಲಾಖೆಯ ವಿಳಾಸಕ್ಕೆ ಭೇಟಿ ನೀಡಿ, ಡಿ.15ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ತಜ್ಞ ವೈದ್ಯಾಧಿಕಾರಿಗಳು – ಅವಶ್ಯಕತೆಗಳಿಗೆ ಅನುಗುಣವಾಗಿ ಫಿಜಿಶಿಯನ್ – 02 ಹುದ್ದೆಗಳು ಸೈಕ್ರಿಯಾಟಿಸ್ಟ್ – 01 ಹುದ್ದೆ ಎಂ.ಬಿ.ಬಿ.ಎಸ್ ವೈದ್ಯರು – ನಿಯಮಾನುಸಾರ ಸರ್ಕಾರದ ಆದೇಶದಂತೆ ಜಿಲ್ಲಾ ಸಲಹೆಗಾರರು, ಕ್ವಾಲಿಟಿ ಅಶ್ಶೂರೆನ್ಸ್ – 01 ಹುದ್ದೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರು – 02 ಹುದ್ದೆಗಳು ಆಡಿಯೋಲಾಜಿಸ್ಟ್ – 01 ಹುದ್ದೆ ಬ್ಲಾಕ್ ಎಪಿಡೆಮಿಯಾಲಜಿಸ್ಟ್ – 02 ಹುದ್ದೆಗಳು ಜಿಲ್ಲಾ ಹಣಕಾಸು ಮತ್ತು ಲಾಜಿಸ್ಟಿಕ್ ಸಲಹೆಗಾರರು – 01 ಹುದ್ದೆ ಆಡಿಯೋಮೆಟ್ರಿಕ್ ಅಸಿಸ್ಟೆಂಟ್ – 01 ಹುದ್ದೆ ನೇತ್ರ ಸಹಾಯಕರು – 03 ಹುದ್ದೆಗಳು ಕಿರಿಯ ಆರೋಗ್ಯ ಸಹಾಯಕರು – 02 ಹುದ್ದೆಗಳು ಕ್ಷಯರೋಗ ಆರೋಗ್ಯ ಸಂದರ್ಶಕ – 01 ಹುದ್ದೆ ಜಿಲ್ಲಾ ಪಿ.ಪಿ.ಎಂ ಸಂಯೋಜಕರು – 01 ಹುದ್ದೆ ಪ್ರಯೋಗಶಾಲಾ ತಂತ್ರಜ್ಞರು – 01 ಹುದ್ದೆ ಪ್ರಯೋಗ ಶಾಲಾ ತಂತ್ರಜ್ಞರು – 07 ಹುದ್ದೆಗಳು ತಾಂತ್ರಿಕ ಮೇಲ್ವಿಚಾರಕರು – 01 ಹುದ್ದೆ ಮೈಕ್ರೋಬಯಾಲಾಜಿಸ್ಟ್ – 01 ಹುದ್ದೆ ಪ್ರಯೋಗ ಶಾಲಾ ತಂತ್ರಜ್ಞರು – 02 ಹುದ್ದೆಗಳು ಪ್ರಯೋಗ ಶಾಲಾ ಸಹಾಯಕರು ಕಮ್ ಡಾಟಾ ಎಂಟ್ರಿ ಆಪರೇಟರ್ – 01 ಹುದ್ದೆ ಶುಶೂಷಕಿಯರು – ಅವಶ್ಯಕತೆಗೆ ಅನುಗುಣವಾಗಿ ಡಿ.ಇ.ಐ.ಸಿ ಮ್ಯಾನೇಜರ್ – 01 ಹುದ್ದೆ ಪ್ಯಾರಾ ಮೆಡಿಕಲ್ ವರ್ಕರ್ – 01 ಹುದ್ದೆ
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ, ಡಿಪ್ಲೋಮಾ, ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ, ನರ್ಸಿಂಗ್ ಎಂ.ಬಿ.ಬಿ.ಎಸ್, ಎಂ.ಡಿ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 30 ರಿಂದ 45 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಮತ್ತು ಮೆರಿಟ್ ನಿಯಮದ ಅನುಸಾರ ನೇರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 15,000ರೂ. ಗಳಿಂದ 1,10,000ರೂ. ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಮೇಲಿನ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಪಡೆದು.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ. ಈ ಕೆಳಗಿನ ವಿಳಾಸಕ್ಕೆ ಡಿಸೆಂಬರ್ 15ರೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಉತ್ತರಕನ್ನಡ, ಕಾರವಾರ.
ನೇರ ಸಂದರ್ಶನ/ ದಾಖಲೆ ಪರಿಶೀಲನೆ ನಡೆಯುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣ, ಕಾರವಾರ
Yes