ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ಸರ್ಕಾರದಿಂದ ಸಾಲ, ಅರ್ಜಿ ಆಹ್ವಾನ

By Shwetha Chidambar

Published On:

IST

ಫಾಲೋ ಮಾಡಿ

DBCDC Higher Education Loan Application 2025
DBCDC Higher Education Loan Application 2025

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ(Higher Education Loan Application 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿoಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಪ್ರಮುಖ ದಿನಾಂಕಗಳು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುವುದಿಲ್ಲ. ಯೋಜನೆಗೆ ಅರ್ಜಿ ಸಲ್ಲಿಕೆಯ ಪೋರ್ಟಲ್ ಸದಾ ತೆರೆದಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ಗರಿಷ್ಠ, 15 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.
  • ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
  • ವಿದ್ಯಾರ್ಥಿಯು QS World Ranking 1000 ರೊಳಗೆ ಬರುವ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು.

ವಯೋಮಿತಿ:

  • ಸ್ನಾತಕೋತ್ತರ ಕೋರ್ಸ್ ಗಳಿಗೆ ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು
  • Phd ಕೋರ್ಸ್ ಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

ಯೋಜನೆಯ ಅಡಿಯಲ್ಲಿ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿ:

ವಾರ್ಷಿಕ ಗರಿಷ್ಠ 25ಲಕ್ಷ ರೂ.ಗಳು ಹಾಗೂ ಪೂರ್ಣ ಕೋರ್ಸ್ ಅವಧಿಗೆ 50ಲಕ್ಷ ರೂ.ಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.
  • ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವವಿದ್ಯಾಲಯದ ಪ್ರವೇಶ ಪತ್ರ (Offer Letter)
  • ವಿದ್ಯಾರ್ಥಿಯ ವೀಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.
  • ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
  • ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

How to Apply for DBCDC Higher Education Loan Application 2025

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;

ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಹತ್ತಿರದ ಗ್ರಾಮ್ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.

ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.

ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004, 8050770005 ಹಾಗೂ ಮೈಸೂರು ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ-0821-2341194ಗೆ ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Important Direct Links:

Higher Education Loan Application 2025 LinkApply Now
Official Websitedbcdc.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment