ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವರ್ತಕ ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿ ಯಾರ್ಡ್ ಆಗಿರುವ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL)ನಲ್ಲಿ ವಿವಿಧ ವೃಂದದ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 11 ಸ್ಥಾನಗಳಿಗೆ ಖಾಲಿ ಇದ್ದು, ಹುದ್ದೆಗಳಿಗೆ ಅನುಗುಣವಾಗಿ ಖಾಯಂ ನೇಮಕಾತಿ ಆಧಾರ, ನಿಶ್ಚಿತ ಅವಧಿಯ ಒಪ್ಪಂದ ಆಧಾರ ಮತ್ತು ಅರೆಕಾಲಿಕ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜ.13ರೊಳಗೆ HSL ಅಧಿಕೃತ ಜಾಲತಾಣ https://hslvizag.in/en/careersಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಡಿಸೆಂಬರ್ 23, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 13, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 13, 2026
ಹುದ್ದೆಯ ವಿವರಗಳು:
ಜನರಲ್ ಮ್ಯಾನೇಜರ್ (ಟೆಕ್ನಿಕಲ್) – 01 ಹುದ್ದೆ
ಜನರಲ್ ಮ್ಯಾನೇಜರ್ (HR) – 01 ಹುದ್ದೆ
ಡೆಪ್ಯೂಟಿ ಜನರಲ್ ಮ್ಯಾನೇಜರ್ (HR) – 01 ಹುದ್ದೆ
ಮ್ಯಾನೇಜರ್ (HR) – 03 ಹುದ್ದೆಗಳು
ಡೆಪ್ಯೂಟಿ ಮ್ಯಾನೇಜರ್ (ಸೇಫ್ಟಿ) – 01 ಹುದ್ದೆ
ಡೆಪ್ಯೂಟಿ ಮ್ಯಾನೇಜರ್ (ಫೈನಾನ್ಸ್) – 01 ಹುದ್ದೆ
ಸೀನಿಯರ್ ಮುಖ್ಯ ಯೋಜನಾ ಅಧೀಕ್ಷಕರು (ಟೆಕ್ನಿಕಲ್) – 02 ಹುದ್ದೆಗಳು
ಸೀನಿಯರ್ ಕನ್ಸಲ್ಟೆಂಟ್ – 01 ಹುದ್ದೆ
ಒಟ್ಟು – 11 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ/ಕಾನೂನು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಅಥವಾ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿರಿ.
ವಯೋಮಿತಿ:
23-12-2025 ರಂತೆ;
• ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 52 ವರ್ಷಗಳು
• ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
• ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
• ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
• ಸೀನಿಯರ್ ಮುಖ್ಯ ಯೋಜನಾ ಅಧೀಕ್ಷಕರ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 56 ವರ್ಷಗಳು
• ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 62 ವರ್ಷಗಳು
ವಯೋಮಿತಿ ಸಡಿಲಿಕೆ; ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ (ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ ಒ.ಬಿ.ಸಿ) ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
ಸಂದರ್ಶನ
ಅಂತಿಮ ಆಯ್ಕೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 50,000ರೂ.ಗಳಿಂದ 2,60,000ರೂ.ವರೆಗೆ ಮಾಹೆಯಾನ ವೇತನವನ್ನು ಪ್ರತಿ ತಿಂಗಳೂ ನೀಡಲಾಗುತ್ತದೆ.
ಅರ್ಜಿ ಶುಲ್ಕ;
ಇತರೆ ಎಲ್ಲಾ ಅಭ್ಯರ್ಥಿಗಳಿಗೆ – 300ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪಿಡಬ್ಲ್ಯೂಡಿ ಹಾಗೂ ಆಂತರಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
• ಅಭ್ಯರ್ಥಿಗಳು ಮೊದಲಿಗೆ HSL ಅಧಿಕೃತ ಜಾಲತಾಣದ “Career” ವಿಭಾಗ https://hslvizag.in/en/careersಕ್ಕೆ ಭೇಟಿ ನೀಡಿ.
• ನಂತರ “ಪ್ರಸ್ತುತ ಹುದ್ದೆಗಳು(Current Openings)” ಶೀರ್ಷಿಕೆಯ ಮೇಲೆ ಟ್ಯಾಪ್ ಮಾಡಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ವಿಭಾಗದಲ್ಲಿ ನೀಡಲಾಗಿರುವ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ನಮೂದಿಸಿ ಲಾಗಿನ್ ಆಗಿ.
• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ವೈಯಕ್ತಿಕ ಮಾಹಿತಿ, ಸಹಿ, ಭಾವಚಿತ್ರ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | hslvizag.in |
| More Updates | KarnatakaHelp.in |
Manger