ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಡಿ ಬರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL)ನ ವಿವಿಧ ವಿಭಾಗಗಳಿಗೆ ಪದವೀಧರ ಅಪ್ರೆಂಟಿಸ್ ಟ್ರೈನಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಭಾರತದಾದ್ಯಂತ ಹೆಚ್‌ಪಿಸಿಎಲ್‌ನ ಮಾರ್ಕೆಟಿಂಗ್ ವಿಭಾಗದ ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್ ವಿಭಾಗಗಳಿಗೆ ಒಟ್ಟು 608 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಕರ್ನಾಟಕಕ್ಕೆ 44 ಸ್ಥಾನಗಳು ಮೀಸಲಿವೆ. ಬಿ.ಇ ಅಥವಾ ಬಿ.ಟೆಕ್ ಪದವೀಧರ ಅಭ್ಯರ್ಥಿಗಳು ಮಾ.02ರೊಳಗೆ ಅಧಿಕೃತ ವೆಬ್ಸೈಟ್ https://www.hindustanpetroleum.com/job-openingsನ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಫೆಬ್ರವರಿ 16, 2026
- ಅರ್ಜಿ ಸಲ್ಲಿಸಲು ಕೊನೆಯ ದಿನ – ಮಾರ್ಚ್ 02, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್) ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
02-03-2026ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 25 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಆಯ್ಕೆ ಪ್ರಕ್ರಿಯೆ:
- ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
- ದಾಖಲೆಗಳ ಪರಿಶೀಲನೆ
ಸ್ಟೈಫಂಡ್:
ಪ್ರತಿ ಅಭ್ಯರ್ಥಿಗಳಿಗೆ ₹25,000ವರೆಗೆ ಮಾಹೆಯಾನ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು HPCL ಅಧಿಕೃತ ವೆಬ್ಸೈಟ್ https://www.hindustanpetroleum.com/job-openingsಗೆ ಭೇಟಿ ನೀಡಿ.
• *ಉದ್ಯೋಗಾವಕಾಶಗಳು* ವಿಭಾಗದಲ್ಲಿ ನೀಡಲಾಗಿರುವ “HPCL ಪದವೀಧರ ಅಪ್ರೆಂಟಿಸ್ ತರಬೇತಿದಾರರ ನೇಮಕಾತಿ (2026-27)” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ *ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ* ಆಯ್ಕೆಯನ್ನು ಆರಿಸಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.hindustanpetroleum.com |
| More Updates | KarnatakaHelp.in |