ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL) ವಿವಿಧ ವೃಂದ/ವಿಭಾಗದ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹೊಸಬರು ಮತ್ತು ಅನುಭವಿ ವೃತ್ತಿಪರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಎಂಜಿನಿಯರ್, ಆಫೀಸರ್, ಸೀನಿಯರ್ ಆಫೀಸರ್ ಹಾಗೂ ಮ್ಯಾನೇಜರ್ ಸೇರಿದಂತೆ ಇತರೆ ಹುದ್ದೆಗಳಿಗೆ 731 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮಾ.25ರವರೆಗೆ ಕಾಲಾವಕಾಶ ನೀಡಲಾಗಿದ್ದು, ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತರು ಉದ್ಯೋಗಾಕಾಂಕ್ಷಿಗಳು ಹೆಚ್ಪಿಸಿಎಲ್ ವೃತ್ತಿಜೀವನದ ಅಧಿಕೃತ ವೆಬ್ಸೈಟ್ ಲಿಂಕ್ https://jobs.hpcl.co.in/Recruit_New/recruitlogin.jspಗೆ ಭೇಟಿ ನೀಡಿ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 25, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಡಿಪ್ಲೋಮಾ, ಪದವಿ, ಎಂಬಿಎ, ಸಿ.ಎ, ಸಿ.ಎಮ್.ಎ, ಎಂ.ಎಸ್.ಸಿ ಎಲ್.ಎಲ್.ಬಿ, ಪಿಜಿಡಿಎಂ, ಬಿಬಿಎ ಪದವಿ ಪೂರ್ಣಗೊಳಿಸಿರಬೇಕು.
• ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿದ್ಯಾರ್ಹತೆ ವಿವರಗಳಿಗಾಗಿ ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ:
ಕನಿಷ್ಠ ಮಿತಿ 18 ವರ್ಷಗಳು ಗರಿಷ್ಠ ಮಿತಿ 25-45 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)
ಗುಂಪು ಕಾರ್ಯ, ಸೈಕೋಮೆಟ್ರಿಕ್ ಮೌಲ್ಯಮಾಪನ, ಕೌಶಲ್ಯ ಪರೀಕ್ಷೆ
ವೈಯಕ್ತಿಕ ಸಂದರ್ಶನ
ದೈಹಿಕ ಸಾಮರ್ಥ್ಯ ದಕ್ಷತೆ ಪರೀಕ್ಷೆ (ಅನ್ವಯಿಸಿದರೆ)
ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ಅನ್ವಯಿಸುತ್ತದೆ.
ಸಂಬಳ:
ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ₹30,000 ರಿಂದ ₹2,80,000ವರೆಗೆ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹1180 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು ಹೆಚ್ಪಿಸಿಎಲ್ ವೃತ್ತಿಜೀವನದ ಅಧಿಕೃತ ವೆಬ್ಸೈಟ್ https://www.hindustanpetroleum.com/job-openingsಗೆ ಭೇಟಿ ನೀಡಿ.
• *ಉದ್ಯೋಗಾವಕಾಶಗಳು* ವಿಭಾಗದಲ್ಲಿ ನೀಡಲಾಗಿರುವ “ಅಧಿಕಾರಿಗಳ ನೇಮಕಾತಿ 2026(Recruitment of Officers 2026)” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ *ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ* ಆಯ್ಕೆಯನ್ನು ಆರಿಸಿ.
Hpcl Career Online Application Form Link
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.