Hubli-Dharwad Anganwadi Vacancy 2024:ಹುಬ್ಬಳಿ- ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ, 8 ಅಂಗನವಾಡಿ ಸಹಾಯಕಿಯರು ಮತ್ತು ಹುಬ್ಬಳ್ಳಿ- ಧಾರವಾಡ ಶಹರ ಯೋಜನೆಯಲ್ಲಿ ಖಾಲಿ ಇರುವ 182 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
PUC ಮತ್ತು SSLC ಪಾಸ್ ಮಾಡಿರುವ ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಸೆಪ್ಟೆಂಬರ್ 2, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.
Shortview of Hubli-Dharwad Anganwadi Recruitment 2024
Organization Name – Women & Child Development (WCD) Post Name – Anganwadi Worker and Helper Total Vacancy – 182 Application Process: Online Job Location – Hubli–Dharwad
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 2, 2024
ಖಾಲಿ ಹುದ್ದೆಗಳ ವಿವರ:
ಹುಬ್ಬಳ್ಳಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ -09 ಅಂಗನವಾಡಿ ಸಹಾಯಕಿ – 08
ಶಹರ ವಲಯದಲ್ಲಿ ಖಾಲಿ ಇರುವ ಹುದ್ದೆಗಳು ಅಂಗನವಾಡಿ ಸಹಾಯಕಿ -182
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.