IAS KAS Prelims Training 2025: ಐ.ಎ.ಎಸ್, ಕೆ.ಎ.ಎಸ್ ಪೂರ್ವಭಾವಿ ತರಬೇತಿ, ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

IAS KAS Prelims Training 2025 CET Registration
Free IAS KAS Prelims Training 2025 CET

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ(Social Welfare Department) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ(SC)/ಪರಿಶಿಷ್ಟ ಪಂಗಡ(ST)ಗಳ ಮತ್ತು ಇತರೆ ಹಿಂದುಳಿದ ವರ್ಗ(OBC)ಗಳ ಅಭ್ಯರ್ಥಿಗಳಿಂದ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ(Free IAS KAS Prelims Training 2025) ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗವು ಪ್ರತಿ ವರ್ಷ ನಡೆಸುವ ಐ.ಎ.ಎಸ್, ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆ.ಎ.ಎಸ್ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಸಿದ್ದೆತಗೆ (ಗೆಜೆಟೆಡ್ ಪ್ರೋಬೆಷನರಿ ಆಫೀಸರ್ಸ್) 10 ತಿಂಗಳು ತರಬೇತಿ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ – ಮೇ 08, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 19, 2025

ತರಬೇತಿ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳ ಆಯ್ಕೆ ಸಂಖ್ಯೆ:

ಐಎಎಸ್ ಅಭ್ಯರ್ಥಿಗಳು 100
ಕೆಎಎಸ್ ಅಭ್ಯರ್ಥಿಗಳು 400

ಶೈಕ್ಷಣಿಕ ಅರ್ಹತೆ:

ಪದವಿ(Degree) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮತ್ತು ಪದವಿ ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಯಾಗಿರಬೇಕು.
  • 371(ಜೆ) ಪ್ರಮಾಣ ಪತ್ರವನ್ನು ಹೊಂದಿರಬೇಕು.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು.
  • ವಿಶೇಷ ಚೇತನ ಮೀಸಲಾತಿಯ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ನಿಗದಿತ ಪ್ರಾಧಿಕಾರದಿಂದ ನಿಗದಿಪಡಿಸಲಾದ ಕೊನೆಯ ದಿನಾಂಕದೊಳಗೆ ವಿಶೇಷ ಚೇತನ ಪ್ರಮಾಣ ಪತ್ರ ಪಡೆದಿರಬೇಕು.
  • ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5.00 ಲಕ್ಷ ಮೀರಬಾರದು.

ವಯೋಮಿತಿ:

  • ಕನಿಷ್ಠ ವಯೋಮಿತಿ 21 ವರ್ಷಗಳು
  • ಗರಿಷ್ಠ ವಯೋಮಿತಿ 37 ವರ್ಷಗಳು

ಆಯ್ಕೆ ವಿಧಾನ:

  • ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ(IAS/KAS Common Entrance Test)ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
  • ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಮೂಲಕ ಅಭ್ಯರ್ಥಿಗಳನ್ನು ತರಬೇತಿ ಸಂಸ್ಥೆಗೆ ನಿಯೋಜಿಸಲಾಗುತ್ತದೆ.
  • ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತದೆ.
  • ಬಯೋಮೆಟ್ರಿಕ್ ಶಿಷ್ಯವೇತನವನ್ನು ಪ್ರತಿ ಮಾಹೆ ತರಬೇತಿ ಕೇಂದ್ರ ಸಂಸ್ಥೆಯವರು ಸಲ್ಲಿಸುವ ಹಾಜರಾತಿಯ ಅನ್ವಯ ಪಾವತಿಸಲಾಗುವುದು. ಆದರೆ ತರಬೇತಿ ಅವಧಿಯಲ್ಲಿ ಯಾವುದೇ ವಸತಿ ಸೌಲಭ್ಯವನ್ನು ನೀಡಲಾಗುವುದಿಲ್ಲ.

ಅರ್ಜಿ ಶುಲ್ಕ:

  • ಸಾಮಾನ್ಯ, 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ – 750 ರೂ .
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ – ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
  • ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ
    08-05 IAS & KAS ಸ್ಪರ್ಧಾತ್ಮಕ ಪರೀಕ್ಷೆಗಳಿ ತರಬೇತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಅರ್ಜಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
  • ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿ ಮಾಡಿ. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಕನಿಷ್ಠ 2 ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

KEA IAS KAS Prelims Training 2025 Notification PDFDownload
IAS KAS Prelims Training 2025 CET Registration Linkಮೇ.8(ನಾಳೆ) ಲಭ್ಯ
Official Website Kea.Kar.Nic.In
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment