ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ದಿನಾಂಕ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ(IAS KAS Prelims Training Exam Result 2025)ಯನ್ನು ಪ್ರಕಟಿಸಲಾಗಿದೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಅಂತಿಮ ಪರಿಷ್ಕೃತ ಕೀ ಉತ್ತರಗಳನ್ನು ಜೂ.13ರಂದು ಪ್ರಕಟಿಸಲಾಗಿತ್ತು. ಇದೀಗ ಪ್ರಾಧಿಕಾರವು ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಾತ್ಕಾಲಿಕ ಅಂಕ ಪಟ್ಟಿಯನ್ನು ಪರಿಶೀಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
How to Download IAS KAS Prelims Training Score Card Result 2025
ತಾತ್ಕಾಲಿಕ ಅಂಕಪಟ್ಟಿ ವೀಕ್ಷಿಸುವ ವಿಧಾನ;