ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ IB)ಯು ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ.
ಒಟ್ಟು 258 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ – II/ಟೆಕ್ (ACIO-II/ಟೆಕ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ನ.16 ರೊಳಗೆ ಅರ್ಜಿಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MHA ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/96338/Index.htmlಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಕ್ಟೋಬರ್ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 16, 2025
ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 16, 2025
ಆಫ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 18, 2025
ಶೈಕ್ಷಣಿಕ ಅರ್ಹತೆ:
IB ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗೇಟ್ 2023, 2024 ಅಥವಾ 2025ರಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (ಗೇಟ್ ಕೋಡ್: EC) ಅಥವಾ ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫರ್ಮೇಷನ್ ಟೆಕ್ನಾಲಜಿ (ಗೇಟ್ ಕೋಡ್: CS) ನಲ್ಲಿ ಅರ್ಹತಾ ಕಟ್-ಆಫ್ ಅಂಕಗಳನ್ನು ಪಡೆದಿರಬೇಕು ಜೊತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಅಥವಾ ಎಂ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
16-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು ಮತ್ತು ವಿಧವೆಯರು, ವಿಚ್ಛೇದಿತ ಮಹಿಳೆಯರು ಮತ್ತು ತಮ್ಮ ಗಂಡನಿಂದ ನ್ಯಾಯಾಂಗವಾಗಿ ಬೇರ್ಪಟ್ಟು ಮರುಮದುವೆಯಾಗದ ಮಹಿಳೆಯರಿಗೆ – 8 ರಿಂದ 13 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
• ACIO-II/Tech ಹುದ್ದೆಯ ಮಾನದಂಡಗಳು ಅಂಗವೈಕಲ್ಯ (PwBDs) ಹೊಂದಿರುವ ಯಾವುದೇ ವರ್ಗದ ವ್ಯಕ್ತಿಗಳಿಗೆ ಸೂಕ್ತವೆಂದು ಗುರುತಿಸಲಾಗಿಲ್ಲ. ಆದ್ದರಿಂದ, ಅವರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ:
ಗೇಟ್ ಸ್ಕೋರ್ ಕಾರ್ಡ್ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
ಕೌಶಲ್ಯ ಪರೀಕ್ಷೆ
ಸಂದರ್ಶನದ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,900-1,42,400ರೂ. ವರೆಗೆ ವೇತನ ಜೊತೆಗೆ ಅನುಮತಿಸಬಹುದಾದ ಕೇಂದ್ರ ಸರ್ಕಾರಿ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 200 ರೂ. ಪ.ಜಾತಿ, ಪ.ಪಂಗಡ, ಇಎಸ್.ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೂ – 100 ರೂ.
ಅರ್ಜಿ ಸಲ್ಲಿಸುವ ವಿಧಾನ:
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ಜಾಲತಾಣದಲ್ಲಿ ನೀಡಲಾದ https://cdn.digialm.com/EForms/configuredHtml/1258/96338/Index.htmlಗೆ ಭೇಟಿ
• ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
I need to work in IB jobsss
Yes
I need to work in IB jobs
I completed my B -tech Graduation, i want job
Naveen
Complete bachelor of commerce and worked in international airport complete DGCA ,AVSEC. AND SECURITY TOPICS
I WANT JOB
Iam authentic about IB