ಗುಪ್ತಚರ ಇಲಾಖೆ (IB)ಯಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-ಗ್ರೇಡ್-ll/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3717 ಕಾರ್ಯನಿರ್ವಾಹಕ(ACIO-ii/Executive) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ https://www.mha.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 10, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ(Any Degree) ಪೂರ್ಣಗೊಳಿಸಿರಬೇಕು.
ವಯೋಮಿತಿ:
10-08-2025ರಂತೆ;
ಕನಿಷ್ಠ ಮಿತಿ – 18 ವರ್ಷಗಳು ಗರಿಷ್ಠ ಮಿತಿ – 27 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಶ್ರೇಣಿ-1 ಲಿಖಿತ ಪರೀಕ್ಷೆ
ಶ್ರೇಣಿ-II ಲಿಖಿತ ಪರೀಕ್ಷೆ
ಸಂದರ್ಶನ (100 ಅಂಕಗಳು)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ – 650 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ – 550 ರೂ.
How to Apply for Intelligence Bureau(IB) Executive Recruitment 2025
ಅರ್ಜಿ ಸಲ್ಲಿಸುವ ವಿಧಾನ;
ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ https://www.mha.gov.in/en/notifications/vacanciesಗೆ ಭೇಟಿ ನೀಡಿ.
ನಂತರ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-ಗ್ರೇಡ್-ll/ಕಾರ್ಯನಿರ್ವಾಹಕ ಪರೀಕ್ಷೆ-2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
A gangadhara s/o mallikarauna malvi h b halli
H b halli gangadhara