ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ IB)ನಲ್ಲಿ 2025ನೇ ಸಾಲಿನ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಸಾಮಾನ್ಯ) ಪರೀಕ್ಷೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಗೊಂಡಿದೆ.
ಒಟ್ಟು 362 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು. ನ.22 ರಿಂದ ಡಿ.14ರೊಳಗೆ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು MHA ಅಧಿಕೃತ ಜಾಲತಾಣ https://www.mha.gov.in/enಕ್ಕೆ ಭೇಟಿ ನೀಡಿ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 16, 2025
ಶೈಕ್ಷಣಿಕ ಅರ್ಹತೆ:
IB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ/ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
14.12.2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ವಿಧವೆಯರು, ವಿಚ್ಛೇದಿತ ಮಹಿಳೆಯರು ಮತ್ತು ತಮ್ಮ ಗಂಡನಿಂದ ನ್ಯಾಯಾಂಗವಾಗಿ ಬೇರ್ಪಟ್ಟು ಮರುಮದುವೆಯಾಗದ ಮಹಿಳೆಯರಿಗೆ – 10 ರಿಂದ 15 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ರಿಂದ 15ವರ್ಷಗಳು.
ಆಯ್ಕೆ ವಿಧಾನ:
ಶ್ರೇಣಿ-1 ಪರೀಕ್ಷೆ
ಶ್ರೇಣಿ-2 ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000-56,900ರೂ. ವರೆಗೆ ವೇತನ ಜೊತೆಗೆ ಸ್ವೀಕಾರಾರ್ಹ ಕೇಂದ್ರ ಸರ್ಕಾರಿ ಭತ್ಯೆಗಳನ್ನು ನೀಡಲಾಗುತ್ತದೆ.
ನೇಮಕಾತಿ ಪ್ರಕ್ರಿಯೆ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೂ – 550ರೂ.
ಪರೀಕ್ಷಾ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ವರ್ಗಗಳ ಪುರುಷ ಅಭ್ಯರ್ಥಿಗಳಿಗೆ – 100ರೂ. ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಪರೀಕ್ಷಾ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
• ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ಜಾಲತಾಣ https://www.mha.gov.in/en ಕ್ಕೆ ಭೇಟಿ ನೀಡಿ.
• ಹೊಸದೇನಿದೆ ಭಾಗದಲ್ಲಿ ನೀಡಲಾಗಿರುವ “ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್) ಪರೀಕ್ಷೆ-2025” – ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.