ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯು ಭದ್ರತಾ ಸಹಾಯಕ/ಕಾರ್ಯನಿರ್ವಾಹಕ(SA/Exe) ಹುದ್ದೆಗಳ ನೇಮಕಾತಿ ಸಂಬಂಧ ಸೆ.29 ಮತ್ತು 30 ರಂದು ನಡೆಯಲಿರುವ ಶ್ರೇಣಿ-1 ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಈ ಹಿಂದೆ ಒಟ್ಟು 4987 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಜುಲೈ 2025ರಂದು ಅಧಿಸೂಚಿಸಲಾಗಿತ್ತು. ಸದರಿ ನೇಮಕಾತಿಗಾಗಿ ಮೊದಲ ಹಂತದಲ್ಲಿ ನಡೆಸಲಾಗುವ ಶ್ರೇಣಿ -1 ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ನಗರದ ಅಧಿಕೃತ ಮಾಹಿತಿಯನ್ನು ಇಲಾಖೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು IB ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/94478/login.htmlಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು.