ಗುಪ್ತಚರ ಇಲಾಖೆ: ಭದ್ರತಾ ಸಹಾಯಕ(MT) ಹುದ್ದೆಗಳ ನೇಮಕಾತಿ; ಸೆ.06ರಿಂದ ಅರ್ಜಿ ಸಲ್ಲಿಸಿ
ಗುಪ್ತಚರ ಇಲಾಖೆಯ ಸದರಿ ನೇಮಕಾತಿಗೆ ಅರ್ಜಿ ಸಲ್ಲಿಕೆಯು ಸೆ. ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತಾ ಮಾನದಂಡಗಳೇನು, ಮುಖ್ಯ ದಿನಾಂಕಗಳು ಯಾವವು ಹಾಗೂ ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ – IB)ಯು ಭದ್ರತಾ ಸಹಾಯಕ (ಮೋಟಾರ್ ಸಾರಿಗೆ)ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಪ್ರಸ್ತುತ ಖಾಲಿ ಇರುವ ಒಟ್ಟು 455 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಸರ್ಕಾರಿ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು MHA ಅಧಿಕೃತ ಜಾಲತಾಣ https://www.mha.gov.in/en/notifications/vacancies ಕ್ಕೆ ಭೇಟಿ ನೀಡಿ. ಸೆ.20ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 06, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 28, 2025
ಶೈಕ್ಷಣಿಕ ಅರ್ಹತೆ:
IB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಮೆಟ್ರಿಕ್ಯುಲೇಷನ್(ಎಸ್ಸೆಸ್ಸೆಲ್ಸಿ) ಪೂರ್ಣಗೊಳಿಸಿರಬೇಕು ಮತ್ತು ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಮಾನ್ಯವಾದ ಮೋಟಾರು ಕಾರು ಚಾಲನಾ ಪರವಾನಗಿ (LMV) ಹೊಂದಿರಬೇಕು.
• ಮೋಟಾರ್ ಕಾರ್ಯವಿಧಾನದ ಜ್ಞಾನ (ಅಭ್ಯರ್ಥಿಯು ವಾಹನದಲ್ಲಿನ ಸಣ್ಣ ದೋಷಗಳನ್ನು ತೆಗೆದುಹಾಕಲು ಶಕ್ತರಾಗಿರಬೇಕು) ಮಾನ್ಯ ಚಾಲನಾ ಪರವಾನಗಿ ಪಡೆದ ನಂತರ ಕನಿಷ್ಠ ಒಂದು ವರ್ಷದವರೆಗೆ ಮೋಟಾರು ಕಾರು ಚಾಲನೆ ಮಾಡಿದ ಅನುಭವ ಹಾಗೂ ಅಭ್ಯರ್ಥಿಯು ಅರ್ಜಿ ಸಲ್ಲಿಸಿರುವ ರಾಜ್ಯದ ನಿವಾಸ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ:
28-09-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ವಯೋಮಿತಿ ಸಡಿಲಿಕೆ:
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
ಆಯ್ಕೆ ವಿಧಾನ:
ಶ್ರೇಣಿ-I ಪರೀಕ್ಷೆ(ಆನ್ಲೈನ್ ಪರೀಕ್ಷೆ)
ಶ್ರೇಣಿ-II ಪರೀಕ್ಷೆ (ಮೋಟಾರ್ ಮೆಕ್ಯಾನಿಸಂ & ಚಾಲನಾ ಪರೀಕ್ಷೆ ಮತ್ತು ಸಂದರ್ಶನ)
ದಾಖಲೆ ಪರಿಶೀಲನೆ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21700-69100ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ವರ್ಗಗಳ ಪುರುಷ ಅಭ್ಯರ್ಥಿಗಳಿಗೆ – 650 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೂ – 550 ರೂ.
ಅರ್ಜಿ ಸಲ್ಲಿಸುವ ವಿಧಾನ:
ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ಜಾಲತಾಣ https://गृहमंत्रालय.सरकार.भारत/en ಕ್ಕೆ ಭೇಟಿ ನೀಡಿ.
ಸೆಪ್ಟೆಂಬರ್ 06 ರಂದು ಸಕ್ರಿಯವಾಗುವ “ಭದ್ರತಾ ಸಹಾಯಕ (ಮೋಟಾರು ಸಾರಿಗೆ) ಪರೀಕ್ಷೆ-2025” – ಅರ್ಜಿ ನಮೂನೆ ಆಯ್ಕೆ ಮಾಡಿ.
ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
2nd year completed