ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಐಬಿಪಿಎಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲಿರುವ ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆ.01ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಮತ್ತು ಆಸಕ್ತ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್ https://www.ibps.in/index.php/careers/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಆಗಸ್ಟ್ 01, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 21, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪದವಿ ಸಮಾನ ಅರ್ಹತೆ ಹೊಂದಿರಬೇಕು.
ವಯೋಮಿತಿ:
- ಕನಿಷ್ಠ ಮಿತಿ – 20 ವರ್ಷಗಳು
- ಗರಿಷ್ಠ ಮಿತಿ – 28 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ವ್ಯಕ್ತಿತ್ವ ಪರೀಕ್ಷೆ
- ಸಂದರ್ಶನ
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶೀಘ್ರದಲ್ಲಿಯೇ ತಿಳಿಸಲಾಗುವುದು.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ – ಶೀಘ್ರದಲ್ಲಿಯೇ ತಿಳಿಸಲಾಗುವುದು.
How to Apply for IBPS Clerk (CSA) 2025 Notification
ಅರ್ಜಿ ಸಲ್ಲಿಸುವ ವಿಧಾನ;
- IBPS ಅಧಿಕೃತ ವೆಬ್ ಸೈಟ್ https://www.ibps.in/index.php/careers/ ಗೆ ಭೇಟಿ ನೀಡಿ.
- ಗ್ರಾಹಕ ಸೇವಾ ಸಂಘಟಕರ (CSA) ನೇಮಕಾತಿಗಾಗಿ ಸಾಮಾನ್ಯ ನೇಮಕಾತಿ-2025* ಅರ್ಜಿ ನಮೂನೆ ಆಯ್ಕೆ ಮಾಡಿ.
- ಅರ್ಜಿಯಲ್ಲಿ ಕೇಳಲಾಗಿರುವ ಮೂಲ ಮಾಹಿತಿ, ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Short Notification PDF | Download |
Official Detailed Notification PDF | Soon |
Online Application Form Link(ಆ.01ರಿಂದ) | Soon |
Official Website | ibps.in |
More Updates | Karnatakahelp.in |