ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಮಂಡಳಿ (IBPS) 2024 ರಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಉದ್ಯೋಗಾವಕಾಶವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಸರ್ಕಾರಿ ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ಗಳನ್ನು ನೇಮಿಸಿಕೊಳ್ಳಲು ವಾರ್ಷಿಕವಾಗಿ ನೇಮಕಾತಿ ಅಭಿಯಾನವನ್ನು ನಡೆಸಲಾಗುತ್ತದೆ. ಒಟ್ಟು 6120 ಸಾವಿರಕ್ಕೂ ಹೆಚ್ಚಿಗೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.ibps.in ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. IBPSನ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವುದು ಹೇಗೆ, ಎಂಬುದರ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಗಮನವಿಟ್ಟು ಓದಿರಿ.
Institute Name – Institute of Banking Personnel Selection (IBPS) Post Name – Clerk Total Vacancy – 6128 Application Process: Online Place of Employment – All over India (Karnataka)
Important Dates:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜುಲೈ 1, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 28, 2024(Extended)
IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ – ಆಗಸ್ಟ್ 24, 25 ಮತ್ತು 31, 2024
ಮೇನ್ಸ್ ಪರೀಕ್ಷೆಯ ದಿನಾಂಕ – ಅಕ್ಟೋಬರ್ 13 , 2024
ಹುದ್ದೆಗಳ ಸಂಖ್ಯೆ:
ಒಟ್ಟು 6128 ಹುದ್ದೆಗಳ ನೇಮಕಾತಿ
ಶೈಕ್ಷಣಿಕ ಅರ್ಹತೆ:
ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆರಬೇಕು.
ಕನಿಷ್ಠ ಶೇಕಡಾ 45 ಅಂಕಗಳೊಂದಿಗೆ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
SC/ST ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾ 40 ಅಂಕಗಳು ಸಾಕು.
ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾ 35 ಅಂಕಗಳು ಸಾಕು
ವಯಸ್ಸಿನ ಮಿತಿ:
IBPS ಕ್ಲರ್ಕ್ ಅಧಿಸೂಚನೆ 2024 ರಲ್ಲಿ ತಿಳಿಸಿರುವಂತೆ ಕನಿಷ್ಠ ವಯಸ್ಸಿನ ಮಿತಿ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಎರಡು ಹಂತದ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು:
ಪ್ರಾಥಮಿಕ ಪರೀಕ್ಷೆ: ಈ ಪರೀಕ್ಷೆಯು ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
ಮುಖ್ಯ ಪರೀಕ್ಷೆ: ಈ ಪರೀಕ್ಷೆಯು ವಸ್ತುನಿಷ್ಠ ಮತ್ತು ವ್ಯಕ್ತಿನಿಷ್ಠ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/OBC ಅಭ್ಯರ್ಥಿಗಳಿಗೆ: ₹ 175/-
SC/ST/PWD ಅಭ್ಯರ್ಥಿಗಳಿಗೆ: ₹ 85/-
How to Apply IBPS Clerk Recruitment 2024
ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
IBPS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://www.ibps.in/ Or https://ibpsonline.ibps.in/crpcl14jun24/
‘ಹೊಸ ಬಳಕೆದಾರ ನೋಂದಣಿ’ ಕ್ಲಿಕ್ ಮಾಡಿ.
ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ನೋಂದಾಯಿಸಿ.
ನಿಮ್ಮ ನೋಂದಾಯಿತ ಲಾಗಿನ್ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಿ.
‘ಆನ್‌ಲೈನ್ ಅರ್ಜಿ’ ಆಯ್ಕೆಮಾಡಿ.
ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ.
ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಒಂದು ಪ್ರತಿಯನ್ನು ಮುದ್ರಿಸಿ.