IBPS PO/MT Admit Card 2025: ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Published on:

Updated On:

ಪ್ರೊಬೇಷನರಿ ಅಧಿಕಾರಿಗಳ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ(MT) ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ಗುರುವಾರ (ಆ.14) ಬಿಡುಗಡೆ ಮಾಡಿದೆ.

2025-26ನೇ ಸಾಲಿಗೆ ಭಾಗವಹಿಸುವ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಅಧಿಕಾರಿ/ಮ್ಯಾನೇಜ್‌ಮೆಂಟ್ ಟ್ರೈನಿ (ಪಿಒ/ಎಂಟಿ) ಹುದ್ದೆಗಳ ನೇಮಕಾತಿ ಸಂಬಂಧ ಮೊದಲ ಹಂತದಲ್ಲಿ ನಡೆಸಲಾಗುವ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು IBPS ಅಧಿಕೃತ ವೆಬ್ಸೈಟ್ https://www.ibps.in/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

IBPS (PO) ಪರೀಕ್ಷಾ ದಿನಾಂಕ:

• IBPS PO ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 17, 23 ಹಾಗೂ 24 ರಂದು ಪ್ರತಿದಿನ ನಾಲ್ಕು ಪಾಳಿಗಳಲ್ಲಿ ( ಬೆಳಿಗ್ಗೆ 9 ರಿಂದ ಬೆಳಿಗ್ಗೆ 10 ರವರೆಗೆ, ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 12.30 ರವರೆಗೆ, ಮಧ್ಯಾಹ್ನ 2 ರಿಂದ ಮಧ್ಯಾಹ್ನ 3 ರವರೆಗೆ ಹಾಗೂ ಸಂಜೆ 4.30 ರಿಂದ 5.30ರವರೆಗೆ) ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

• IBPS 2025-26ನೇ ಸಾಲಿಗೆ ಭಾಗವಹಿಸುವ 11 ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

How to Download IBPS PO/MT Prelims Admit Card 2025

IBPS PO ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ;

Ibps Po Mt Prelims Admit Card 2025 Download Link
Ibps Po Mt Prelims Admit Card 2025 Download Link
  1. • IBPS ಅಧಿಕೃತ ವೆಬ್ಸೈಟ್ https://ibpsreg.ibps.in/crppoxvjun25/oecla_aug25/login.php?appid=f685699dad181c4349a2b421b8427275 ಗೆ ಭೇಟಿ ನೀಡಿ.
  2. • ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ನಮೂದಿಸಿ.
  3. • ಕ್ಯಾಪ್ಚವನ್ನು ಭರ್ತಿ ಮಾಡಿ ಲಾಗಿನ್ ಆಗಿ.
  4. • ನಂತರ ನಿಮ್ಮ IBPS PO ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಕಾಣಸಿಗುತ್ತದೆ.
  5. • ಭವಿಷ್ಯದ ಉಲ್ಲೇಖಕ್ಕಾಗಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

IBPS PO/MT Admit Card 2025 Download LinkDownload
Official Websitewww.ibps.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

3 thoughts on “IBPS PO/MT Admit Card 2025: ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ”

Leave a Comment