ICAIನಲ್ಲಿ ನಿರ್ದೇಶಕ, ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published on:

ವಿಶ್ವದ ಅತಿದೊಡ್ಡ ವೃತ್ತಿಪರ ಲೆಕ್ಕಪತ್ರ ಸಂಸ್ಥೆಯಾಗಿರುವ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ICAI)ದಲ್ಲಿ ನಿರ್ದೇಶಕ(ಕಾನೂನು) ಮತ್ತು ನಾನಾ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 109 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ಜಾಲತಾಣ https://icaisr.onlineregistrationform.org/ICAISR/ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 01, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 15, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 15, 2026

ವಿಭಾಗವಾರು ಖಾಲಿ ಇರುವ ಹುದ್ದೆಗಳ ವಿವರ

ನಿರ್ದೇಶಕ(ಕಾನೂನು) – 01 ಹುದ್ದೆ
ಕಾರ್ಯನಿರ್ವಾಹಕ ಅಧಿಕಾರಿ(ಚಾರ್ಟೆಡ್ ಅಕೌಂಟೆಂಟ್) – 75 ಹುದ್ದೆಗಳು
ಕಾರ್ಯನಿರ್ವಾಹಕ ಅಧಿಕಾರಿ(ಕಾನೂನು ಬದ್ಧ) – 15 ಹುದ್ದೆಗಳು
ಕಾರ್ಯನಿರ್ವಾಹಕ ಅಧಿಕಾರಿ(ಕಂಪನಿ ಕಾರ್ಯದರ್ಶಿ) – 02 ಹುದ್ದೆಗಳು
ಕಾರ್ಯನಿರ್ವಾಹಕ ಅಧಿಕಾರಿ(ಸುಸ್ಥಿರತೆ) – 03 ಹುದ್ದೆಗಳು
ಕಾರ್ಯನಿರ್ವಾಹಕ ಅಧಿಕಾರಿ(ಅರ್ಥಶಾಸ್ತ್ರ) – 01 ಹುದ್ದೆ
ಕಾರ್ಯನಿರ್ವಾಹಕ ಅಧಿಕಾರಿ(ಮೂಲಸೌಕರ್ಯ) – 02 ಹುದ್ದೆಗಳು
ಕಾರ್ಯನಿರ್ವಾಹಕ ಅಧಿಕಾರಿ(ಮಾಹಿತಿ ತಂತ್ರಜ್ಞಾನ) – 10 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

✓ ನಿರ್ದೇಶಕ(ಕಾನೂನು) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಚಾರ್ಟೆಡ್ ಅಕೌಂಟೆಂಟ್) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಚಾರ್ಟೆಡ್ ಅಕೌಂಟೆಂಟ್ ಪೂರ್ಣಗೊಳಿಸಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಕಾನೂನು ಬದ್ಧ) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಕಂಪನಿ ಕಾರ್ಯದರ್ಶಿ) ಹುದ್ದೆಗೆ:- ಅಭ್ಯರ್ಥಿಗಳು ಕಂಪನಿ ಕಾರ್ಯದರ್ಶಿ ಅರ್ಹತೆಗಳನ್ನು ಹೊಂದಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಸುಸ್ಥಿರತೆ) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸುಸ್ಥಿರತೆ ವಿಭಾಗದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಅರ್ಥಶಾಸ್ತ್ರ) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ವಿಭಾಗದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಮೂಲಸೌಕರ್ಯ) ಹುದ್ದೆಗಳಿಗೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಬೇಕು.

✓ ಕಾರ್ಯನಿರ್ವಾಹಕ ಅಧಿಕಾರಿ(ಮಾಹಿತಿ ತಂತ್ರಜ್ಞಾನ) ಹುದ್ದೆಗೆ:- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಬೇಕು.

ವಯೋಮಿತಿ:

28-02-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 25 ರಿಂದ 55 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)

ಆಯ್ಕೆ ವಿಧಾನ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಂದರ್ಶನ
  • ದಾಖಲೆ ಪರಿಶೀಲನೆ

ಸಂಬಳ:

ನಿರ್ದೇಶಕ ಹುದ್ದೆಗಳಿಗೆ – ₹205400 – ₹224400
ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ – ₹56,100 – ₹1,77,500

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ₹500

ಅರ್ಜಿ ಸಲ್ಲಿಸುವ ವಿಧಾನ:

• ಅಭ್ಯರ್ಥಿಗಳು ICAI ಅಧಿಕೃತ ಜಾಲತಾಣ https://icaisr.onlineregistrationform.org/ICAISR/ಕ್ಕೆ ಭೇಟಿ ನೀಡಿ.

• ಬಳಿಕ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಅನ್ನು ಮೂಡಿಸಿ ಲಾಗಿನ್ ಆಗಿ.

Icai Director Legal And Executive Officers Notification 2026
Icaiನಲ್ಲಿ ನಿರ್ದೇಶಕ, ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಶೈಕ್ಷಣಿಕ ಮಾಹಿತಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.icai.org
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

4 thoughts on “ICAIನಲ್ಲಿ ನಿರ್ದೇಶಕ, ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ”

Leave a Comment