ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 170 ಸಹಾಯಕ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ -2025 ವಿವಿಧ ವಿಭಾಗಗಳಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ICG ಅಧಿಕೃತ ವೆಬ್ಸೈಟ್ https://joinindiancoastguard.cdac.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 08-07-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23-07-2025
ಹುದ್ದೆಗಳ ವಿವರ:
- ಸಾಮಾನ್ಯ ಕರ್ತವ್ಯ (ಜಿಡಿ) – 140 ಹುದ್ದೆಗಳು
- ಟೆಕ್ (ಎಂಜಿನಿಯರಿಂಗ್/ ಚುನಾಯಿತ) – 30 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
- ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ, ಡಿಪ್ಲೋಮಾ, ಪದವಿ ಬಿಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಿನಾಂಕ 01-07-2026 ರಂತೆ;
- ಕನಿಷ್ಠ ಮಿತಿ – 21 ವರ್ಷಗಳು.
- ಗರಿಷ್ಠ ಮಿತಿ – 25 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
- CGCTA ಲಿಖಿತ ಪರೀಕ್ಷೆ
- ಪ್ರಿಲಿಮ್ಸ್ ಆಯ್ಕೆ ಮಂಡಳಿ
- ಅಂತಿಮ ಆಯ್ಕೆ ಮಂಡಳಿ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 300 ರೂ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply Indian Coast Guard Assistant Commandant Notification 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
- ICG ಅಧಿಕೃತ ವೆಬ್ಸೈಟ್
https://joinindiancoastguard.cdac.in/cgcatreg/candidate/login ಗೆ ಭೇಟಿ ನೀಡಿ. - ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ನಂತರ ಅರ್ಜಿ ಶುಲ್ಕ ಪಾವತಿ ಮಾಡಿ. (ಅನ್ವಯಿಸಿದರೆ)
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | joinindiancoastguard.cdac.in |
More Updates | KarnatakaHelp.in |