ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI) 33 ವಿವಿಧ ಸ್ಪೇಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಡೆಪ್ಯೂಟಿ ಜನರಲ್ ಮ್ಯಾನೇಜರ್ 05 ಸ್ಥಾನಗಳು, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 11 ಸ್ಥಾನಗಳು, ಮ್ಯಾನೇಜರ್ 09 ಸ್ಥಾನಗಳು, ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ 08 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮಾ.25 ರಿಂದ ಏ.08 ರವರೆಗೆ ಕಾಲಾವಕಾಶವಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಐಡಿಬಿಐ ಅಧಿಕೃತ ಜಾಲತಾಣದ ಕರಿಯರ್ ವಿಭಾಗದಲ್ಲಿ ಲಭ್ಯವಿರುವ ಲಿಂಕ್(https://ibpsreg.ibps.in/idbscomar26/) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮಾರ್ಚ್ 25, 2026
- ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ – ಏಪ್ರಿಲ್ 08, 2026
ಶೈಕ್ಷಣಿಕ ಅರ್ಹತೆ:
IDBI ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ ಅಗತ್ಯವಿರುವ ಕೆಲಸದ ಅನುಭವದೊಂದಿಗೆ 12ನೇ ತರಗತಿ, ಡಿಪ್ಲೊಮಾ, ಬಿ.ಟೆಕ್/ಬಿ.ಇ, ಎಂ.ಎಸ್.ಸಿ, ಎಂಸಿಎ ಅಥವಾ ತತ್ಸಮಾನದಂತಹ ಸಂಬಂಧಿತ ಅರ್ಹತೆಗಳನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)
ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ಬದಲಾಗುತ್ತದೆ)
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು.
ಸಂಬಳ:
ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ – ಪ್ರ.ತಿಂ. ₹102300-₹197000
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ – ಪ್ರ.ತಿಂ. ₹85920-₹164000
ಮ್ಯಾನೇಜರ್ ಹುದ್ದೆಗಳಿಗೆ – ಪ್ರ.ತಿಂ. ₹64820-124000
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – ₹6.14-₹6.50 ಲಕ್ಷ
ಆಯ್ಕೆ ಪ್ರಕ್ರಿಯೆ:
- ದಾಖಲೆ ಪರಿಶೀಲನೆ (DV)
- ಗುಂಪು ಚರ್ಚೆ (GD)
- ವೈಯಕ್ತಿಕ ಸಂದರ್ಶನ (Pl)
- ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ (PRMT)
ಅರ್ಜಿ ಶುಲ್ಕ
ಎಸ್ಸಿ,ಎಸ್ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ₹250
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹1050
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು IDBI ಅಧಿಕೃತ ವೆಬ್ಸೈಟ್ https://ibpsreg.ibps.in/idbscomar26/ ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.idbi.bank.in |
| More Updates | KarnatakaHelp.in |
Please I want needed job
Vaishali .qualified.B.A Narasapura kolar Bypass road father Name . Venugopal Tv watching sports.kabadi