ಐಡಿಬಿಐ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IDBI ನ ಅಧಿಕೃತ ವೆಬ್ಸೈಟ್ www.idbibank.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – IDBI Bank Ltd.
Post Name – Junior Assistant Manager (JAM) Grade ‘O’
Total Vacancy – 676
Application Process – Online
Job Location – All Over India(Karnataka)
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 08-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2025
ಶೈಕ್ಷಣಿಕ ಅರ್ಹತೆ:
ಐಡಿಬಿಐ ಬ್ಯಾಂಕ್ ನ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ (Any Degree)ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈಯಕ್ತಿಕ ಸಂದರ್ಶನ
- ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
- ಎಸ್ ಸಿ, ಎಸ್ ಟಿ, ಪಿ ಡಬ್ಲ್ಯೂ ಡಿ – ಅಭ್ಯರ್ಥಿಗಳಿಗೆ – 250 ರೂ.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ – 1050 ರೂ.
How to Apply for IDBI JAM Recruitment 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
- IDBI ನ ಅಧಿಕೃತ ವೆಬ್ಸೈಟ್ https://www.idbibank.in/idbi-bank-careers-current-openings.aspx ಗೆ ಭೇಟಿ ನೀಡಿ.
- ಪ್ರಸ್ತುತ ತೆರೆಯುವಿಕೆ (Current Openins) ವಿಭಾಗದಲ್ಲಿ 1. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಜೆಎಎಂ) ಗ್ರೇಡ್ ‘ಒ’ ನೇಮಕಾತಿ: 2025-26 (ಹೊಸದು) ಲಿಂಕ್ ಮೇಲೆ ಟ್ಯಾಪ್ ಮಾಡಿ.
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಬಳಕೆದಾರರಾಗಿದ್ದಲ್ಲಿ ನೋಂದಣಿ ಮಾಡಿ ಅಥವಾ ಹೆಸರು/ ಜನ್ಮ ದಿನಾಂಕ/ ಮೊಬೈಲ್ ಸಂಖ್ಯೆ/ ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿ ಮಾಡಿ
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | www.idbibank.in |
More Updates | KarnatakaHelp.in |