2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೆ ಸೇರಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸದಾವಕಾಶವಾಗಿದ್ದು, ಪ.ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ 90 ದಿನಗಳವರೆಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪೂರ್ವ-ನೇಮಕಾತಿ ತರಬೇತಿಯನ್ನು ನೀಡಲಾಗುತ್ತದೆ.
ಪದವಿ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://swdservices.karnataka.gov.in/petccoaching/PSIHomeKan.aspxದ ಮೂಲಕ ಸೆಪ್ಟೆಂಬರ್ 12ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ಕೋರಿದ್ಧಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಆಗಸ್ಟ್ 12, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 12, 2025
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸೆಪ್ಟೆಂಬರ್ 12, 2025ರೊಳಗೆ ಯು.ಜಿ.ಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಒಂದು ವೇಳೆ – ಸೇವಾ ನಿರತ ಅಭ್ಯರ್ಥಿಗಳಾಗಿದ್ದರೆ;
ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಕನಿಷ್ಠ 5 ವರ್ಷಗಳವರೆಗೆ ಸೇವೆ ಸಲ್ಲಿಸಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 31 ವರ್ಷಗಳು
ತರಬೇತಿಯ ವಿವರ:
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತರ ಭಾಗದಲ್ಲಿ – ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆ ಹಾಗೂ ದಕ್ಷಿಣ ಭಾಗದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ 90 ದಿನಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷಾ ಪೂರ್ವ ವಸತಿಯುತ ತರಬೇತಿಯನ್ನು ನೀಡಲಾಗುತ್ತದೆ.
ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ದೈಹಿಕ ಚಟುವಟಿಕೆಗಳು – ಓಟ, ಎತ್ತರ ಜಿಗಿತ, ಶಾಟ್ಪುಟ್, ಡ್ರಿಲ್, ತರಗತಿಯ ತರಬೇತಿ ಹಾಗೂ ದಿನಕ್ಕೆ 3 ಬಾರಿ ಊಟದ ವ್ಯವಸ್ಥೆಯನ್ನು ಮಾಡಿರಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
- ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಿರಬಾರದು.
- ಮಹಿಳೆಯರು ಕನಿಷ್ಠ 45 ಕೆ.ಜಿ ತೂಕ ಹೊಂದಿರಬೇಕು.
- ಅಭ್ಯರ್ಥಿಗಳ ಎತ್ತರ ಪುರುಷರಿಗೆ ಕನಿಷ್ಠ 168 ಸೆಂ.ಮೀ, ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ
ಆಯ್ಕೆ ವಿಧಾನ:
ದೈಹಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ತರಬೇತಿಯ ನಿಯಮಗಳು ಮತ್ತು ಷರತ್ತುಗಳು
• ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಭಾಗದ ಪ್ರಕಾರ ತರಬೇತಿ ವಿಭಾಗವನ್ನು ನಿಯೋಜಿಸಲಾಗುತ್ತದೆ.
• ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ.
• ಅಭ್ಯರ್ಥಿಯು 90 ದಿನಗಳ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಬೇಕು ಹಾಗೂ ತರಬೇತಿ ಆವರಣದಿಂದ ಹೊರಗೆ ಹೋಗಲು ಅವಕಾಶವಿರುದಿಲ್ಲ.
• ತರಬೇತಿ ಅವಧಿಯಲ್ಲಿ ಯಾವುದೇ ಗಾಯಗಳು ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ, ತರಬೇತಿ ಸಂಸ್ಥೆ ಅಥವಾ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ.
How to Apply for IGCCD Free PSI Pre Recruitment Training 2025-26
ಅರ್ಜಿ ಸಲ್ಲಿಸುವ ವಿಧಾನ;
- ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಅಧಿಕೃತ ವೆಬ್ಸೈಟ್ https://swdservices.karnataka.gov.in/petccoaching/PSIHomeKan.aspx ಗೆ ಭೇಟಿ ನೀಡಿ.
- ಪೂರ್ವ-ನೇಮಕಾತಿ ವಸತಿಯುತ ಪೋಲೀಸ್ ಸಬ್-ಇನ್ಸೆಕ್ಟರ್ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್ಲೈನ್ ಅರ್ಜಿ – “ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ ಆಧಾರ್ ಸಂಖ್ಯೆ, ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಹಾಗೂ ಕ್ಯಾಪ್ಚ ನಮೂದಿಸಿ ಮುಂದುವರೆಯಿರಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | swdservices.karnataka.gov.in |
More Updates | KarnatakaHelp.in |