2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಸಹಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪೊಲೀಸ್ ಇಲಾಖೆಗೆ ಸೇರಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ, ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ಪೂರ್ವ-ನೇಮಕಾತಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ದ್ವಿತೀಯ ಪಿಯುಸಿ ಪಾಸಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IGCCD ಅಧಿಕೃತ ವೆಬ್ಸೈಟ್ https://igccd.karnataka.gov.in/home.htmlಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಬೆಂಗಳೂರು ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದರಿ ತರಬೇತಿಯ ವಿವರ, ತರಬೇತಿಯ ಅವಧಿ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಜುಲೈ 22, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 31, 2025
ಶೈಕ್ಷಣಿಕ ಅರ್ಹತೆ:
ಆಗಸ್ಟ್ 31, 2025 ರೊಳಗೆ ಮಾನ್ಯತೆ ಪಡೆದ ಅಂಗೀಕೃತ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಉತೀರ್ಣರಾಗಿರಬೇಕು.
ವಯೋಮಿತಿ:
- ಕನಿಷ್ಠ ಮಿತಿ – 18 ವರ್ಷಗಳು
- ಗರಿಷ್ಠ ಮಿತಿ – 26 ವರ್ಷಗಳು
ತರಬೇತಿಯ ವಿವರ:
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 60 ದಿನಗಳ (ದೈಹಿಕ ಚಟುವಟಿಕೆಗಳು – ಓಟ, ಎತ್ತರ ಜಿಗಿತ, ಶಾಟ್‌ಪುಟ್, ಡ್ರಿಲ್, ತರಗತಿಯ ತರಬೇತಿ, ದಿನಕ್ಕೆ 3 ಬಾರಿ ಊಟದ ವ್ಯವಸ್ಥೆ) ವಸತಿಯುತ ಪೂರ್ವ-ನೇಮಕಾತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು
• ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
• ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
• ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಿರಬಾರದು.
• ಮಹಿಳೆಯರು ಕನಿಷ್ಠ 45 ಕೆಜಿ ತೂಕ ಹೊಂದಿರಬೇಕು.
• ಅಭ್ಯರ್ಥಿಗಳ ಎತ್ತರ ಪುರುಷರಿಗೆ ಕನಿಷ್ಠ 168 ಸೆಂ.ಮೀ, ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ
ಆಯ್ಕೆ ವಿಧಾನ:
ದೈಹಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ತರಬೇತಿಯ ನಿಯಮಗಳು ಮತ್ತು ಷರತ್ತುಗಳು:
• ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಭಾಗದ ಪ್ರಕಾರ ತರಬೇತಿ ವಿಭಾಗವನ್ನು ನಿಯೋಜಿಸಲಾಗುತ್ತದೆ.
• ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ.
• ಅಭ್ಯರ್ಥಿಯು 60 ದಿನಗಳ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಬೇಕು ಹಾಗೂ ತರಬೇತಿ ಆವರಣದಿಂದ ಹೊರಗೆ ಹೋಗಲು ಅವಕಾಶವಿರುದಿಲ್ಲ.
• ತರಬೇತಿ ಅವಧಿಯಲ್ಲಿ ಯಾವುದೇ ಗಾಯಗಳು ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ, ತರಬೇತಿ ಸಂಸ್ಥೆ ಅಥವಾ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ.
How to Apply for IGCCD Police Constable Training 2025-26
ಅರ್ಜಿ ಸಲ್ಲಿಸುವ ವಿಧಾನ;
- ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಅಧಿಕೃತ ವೆಬ್ಸೈಟ್ https://swdservices.karnataka.gov.in/petccoaching/PCHomeKan.aspx ಗೆ ಭೇಟಿ ನೀಡಿ.
- ಪೂರ್ವ-ನೇಮಕಾತಿ ವಸತಿಯುತ ಪೊಲೀಸ್ ಕಾನ್ಸ್-ಟೇಬಲ್ ತರಬೇತಿಗಾಗಿ ಆನ್‌ಲೈನ್ ಅರ್ಜಿ – *ಅರ್ಜಿ ಸಲ್ಲಿಸಿ* ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| IGCCD Police Constable Training 2025-26 Application Form Link | Apply Now |
| Official Website | swd.karnataka.gov.in |
| More Updates | KarnatakaHelp.in |