ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ(ಐಐಎಪಿ)ಯು 05 ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು, ಹೊಸಕೋಟೆ, ಗೌರಿಬಿದನೂರು, ಕೊಡೈಕೆನಾಲ್ ಮತ್ತು ಕಾವಲೂರು ಸ್ಥಳಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅರ್ಜಿದಾರರು ಜೂ.29ರೊಳಗೆ ಐಐಎಪಿ ಅಧಿಕೃತ ವೆಬ್ಸೈಟ್ https://www.iiap.res.in/iia_jobs/ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 29, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 29, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಕಂಪ್ಯೂಟರ್ ಬಳಕೆ ಮತ್ತು ಅದರ ಅಪ್ಲಿಕೇಶನ್‌ಗಳ (ಎಂಎಸ್ ಆಫೀಸ್) ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
29-06-2026 ರಂತೆ
ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ವಯೋಮಿತಿ ಸಡಿಲಿಕೆ: ಸರ್ಕಾರಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ವೇತನ:
ಮಾಹೆಯಾನ ರೂ.25,500-81,100ವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
• ಅರ್ಹ ಅಭ್ಯರ್ಥಿಗಳ ಅರ್ಜಿ ಸ್ಕ್ರೀನಿಂಗ್
• ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಹೇಗೆ.. ಅರ್ಜಿ ಸಲ್ಲಿಸುವ ವಿಧಾನ?
• ಮೊದಲಿಗೆ ಅಭ್ಯರ್ಥಿಗಳು IIAP ಅಧಿಕೃತ ವೆಬ್ಸೈಟ್ https://www.iiap.res.in/iia_jobs/ ಗೆ ಭೇಟಿ ನೀಡಿ.
• ಬಳಿಕ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು *Apply now* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಕೆದಾರರ ಹೆಸರು ಹಾಗೂ ಗುಪ್ತಪದವನ್ನು ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
• ಕೇಂದ್ರ ಸರ್ಕಾರ/ರಾಜ್ಯ ಸರ್ಕಾರ/ ಸ್ವಾಯತ್ತ ಸಂಸ್ಥೆಗಳು/ಅರೆ ಸರ್ಕಾರಿ ಸಂಸ್ಥೆಗಳು/ಪಿಎಸ್‌ಯುಗಳು/ಸಾರ್ವಜನಿಕ ವಲಯದ ಬ್ಯಾಂಕುಗಳು ಇತ್ಯಾದಿಗಳಲ್ಲಿ ಈಗಾಗಲೇ ಉದ್ಯೋಗದಲ್ಲಿರುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
• ಆನ್‌ಲೈನ್ ಅರ್ಜಿಯ ಪ್ರತಿ, ಶಿಕ್ಷಣ ಮತ್ತು ಅನುಭವ ಸಂಬಂಧಿತ ದಾಖಲೆಗಳನ್ನು (ಸ್ವಯಂ-ದೃಢೀಕರಿಸಿದ) ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ “ಫಾರ್ವರ್ಡ್ ಮಾಡುವ ಹುದ್ದೆಗೆ ಅರ್ಜಿ” ಎಂದು ನಮೂದಿಸಿ.
• ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಿಂದ 30 ದಿನಗಳ ಒಳಗೆ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಪೋಸ್ಟ್ ಮೂಲಕ ಕಳುಹಿಸಬೇಕು.
ವಿಳಾಸ: ಆಡಳಿತಾಧಿಕಾರಿ, ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸರ್ಜಾಪುರ ರಸ್ತೆ, 2 ನೇ ಬ್ಲಾಕ್, ಕೋರಮಂಗಲ, ಬೆಂಗಳೂರು 560034
Important Direct Links:
| Official Notification PDF | Download |
| Online Application Form Link | Apply Now |
| Official Website | www.iiap.res.in |
| More Updates | KarnatakaHelp.in |