ಐಐಐಟಿ ರಾಯಚೂರು: ಸಹಾಯಕ ಪ್ರಾಧ್ಯಾಪಕರ ಭರ್ತಿ

Published on:

ರಾಯಚೂರು: ಇಲ್ಲಿನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ(ಐಐಐಟಿಆರ್‌)ಯು ಸಹಾಯಕ ಪ್ರಾಧ್ಯಾಪಕ ಗ್ರೇಡ್‌-I ಮತ್ತು II ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 08 ಸ್ಥಾನಗಳಿಗೆ ನೇಮಕ ನಡೆಯುತ್ತಿದೆ. ಅಭ್ಯರ್ಥಿಗಳು ಪಿಎಚ್.ಡಿ ಪೂರ್ಣಗೊಳಿಸಿರಬೇಕು. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಐಐಐಟಿಆರ್‌ ಅಧಿಕೃತ ಜಾಲತಾಣ https://iiitr.ac.in/careersಕ್ಕೆ ಭೇಟಿ ನೀಡಿ, ಏ.20ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮಾರ್ಚ್ 20, 2026
  • ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಏಪ್ರಿಲ್ 20, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಂಬಂಧಿತ ವಿಭಾಗಗಳಲ್ಲಿ ಅತ್ಯುತ್ತಮ ಶೈಕ್ಷಣಿಕ ಮತ್ತು ಸಂಶೋಧನಾ ದಾಖಲೆಯೊಂದಿಗೆ ಪಿಎಚ್‌ಡಿ ಪದವಿಯನ್ನು ಪಡೆದಿರಬೇಕು.

ಮತ್ತಷ್ಟು ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿ.

ವಯೋಮಿತಿ:

ಗರಿಷ್ಠ ಮಿತಿ 35 ವರ್ಷಗಳು

ವಯೋಮಿತಿ ಸಡಿಲಿಕೆ; ರಾಯಚೂರು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿಯಮಗಳ ಅನುಸಾರ

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ಸಂದರ್ಶನ
  • ದಾಖಲೆ ಪರಿಶೀಲನೆ

ಸಂಬಳ:

ಸದರಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10, 11, ಹಾಗೂ 12ನೇ ವೇತನ ಮಟ್ಟದ ಅನುಸಾರ ಮಾಹೆಯಾನ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – ₹2000
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹1000
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

• ಅರ್ಜಿ ಶುಲ್ಕ ಪಾವತಿಸುವ ಎಸ್.ಬಿ ಕಲೆಕ್ಟ್ ನೇರ ಲಿಂಕ್ – https://onlinesbi.sbi.bank.in/sbicollect/icollecthome.htm?corpID=5608810

ಅರ್ಜಿ ಸಲ್ಲಿಸುವ ಪ್ರಕ್ರಿಯೆ.?

• ಅಭ್ಯರ್ಥಿಗಳು IIITR ಅಧಿಕೃತ ಜಾಲತಾಣ https://iiitr.ac.in/careers ಕ್ಕೆ ಭೇಟಿ ನೀಡಿ.

• ನಂತರ ಅಧ್ಯಾಪಕರ ನೇಮಕಾತಿ ಜಾಹೀರಾತು-2026(Faculty Recruitment Advertisement – 2026) ಶೀರ್ಷಿಕೆಯ ಕೆಳಗೆ ನೀಡಲಾಗಿರುವ – “ಇಲ್ಲಿ ಅರ್ಜಿ ಸಲ್ಲಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.

Iiit Raichur Assistant Professor Grade-I/Grade-Ii Notification 2026
Iiit Raichur Faculty Online Form 2026 View

• ಗೂಗಲ್ ಫಾರ್ಮ್ ನಲ್ಲಿ ಇ-ಮೇಲ್ ಐಡಿ ನಮೂದಿಸಿ ಮುಂದುವರೆಯಿರಿ.

• ನಂತರ ಗೂಗಲ್ ಫಾರ್ಮ್ ಅರ್ಜಿಯಲ್ಲಿ ಕೇಳಲಾಗುವ ತಮ್ಮ ಮೂಲ ಮಾಹಿತಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಎಸ್.ಬಿ ಕಲೆಕ್ಟ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.

• ಭವಿಷ್ಯಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websiteiiitr.ac.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಐಐಐಟಿ ರಾಯಚೂರು: ಸಹಾಯಕ ಪ್ರಾಧ್ಯಾಪಕರ ಭರ್ತಿ”

Leave a Comment