ಬಾಂಬೆಯ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT)ಯಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ 70 ಪದವೀಧರ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ಶಿಪ್ ತರಬೇತಿ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತಾಂತ್ರಿಕೇತರ ವಿಭಾಗಕ್ಕೆ ಆಯ್ಕೆ ಮಾಡಿಕೊಂಡು, 03 ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಪದವೀಧರ ಅಭ್ಯರ್ಥಿಗಳು ಅಧಿಕೃತ ಲಿಂಕ್ (https://docs.google.com/forms/d/e/1FAIpQLSfZcDbmuZjSHthVrRJufJK-_8n1_V34Ol3XvaBpaJPfbHAEow/viewform?usp=header)ನ ಮೂಲಕ ಫೆ.28ರೊಳಗೆ ನೋಂದಣಿಯಾಗಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 28, 2026
ದಾಖಲೆ ಪರಿಶೀಲನೆಯ ತಾತ್ಕಾಲಿಕ ದಿನಾಂಕ – ಮಾರ್ಚ್ 03, 2026 (ದಾಖಲೆ ಪರಿಶೀಲನೆಯ ಸ್ಥಳವನ್ನು ನಂತರ ತಿಳಿಸಲಾಗುವುದು)
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 2023 ನಂತರದಲ್ಲಿ ಕಲೆ, ವಾಣಿಜ್ಯ, ವಿಜ್ಞಾನ, ವ್ಯವಹಾರ ಆಡಳಿತ, ಕಂಪ್ಯೂಟರ್ ಅಪ್ಲಿಕೇಶನ್, ಹೋಟೆಲ್ ನಿರ್ವಹಣೆ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ನಿರ್ವಹಣಾ ವಿಜ್ಞಾನ, ವ್ಯವಹಾರ ಅಧ್ಯಯನ ವಿಷಯಗಳಲ್ಲಿ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
• ಈಗಾಗಲೇ ಬೇರೆಡೆ ಅಪ್ರೆಂಟಿಸ್ಶಿಪ್ ಕಾಯ್ದೆಯಡಿಯಲ್ಲಿ ನೋಂದಾಯಿಸಿಕೊಂಡಿರುವ/ಪಡೆದಿರುವ/ ಪಡೆಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.